ಬಳ್ಳಾರಿ: ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ.
ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾರ್ಟ್‍ಫೋನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವಿಕ್ಷೀಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್ ನೊಂದಿಗೆ, ನಿಮ್ಮ ಸ್ಮಾರ್ಟ್‍ಫೆÇೀನ್‍ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದು. ಅದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ.
ಇದನ್ನೂ ಓದಿ- ಪತ್ರಕರ್ತರ ಜೊತೆ ಡ್ಯಾನ್ಸ್ ಮಾಡಿದ ಜಾಧವ್! ವಿಡಿಯೋ
ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೋಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್) ಮೂಲಕ ದೂರು ನೀಡಬಹುದು.
ಸಿ-ವಿಜಿಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳುವುದು ಹೇಗೆ?
ಮೊದಲು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‍ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್‍ಲೋಡ್ ಮಾಡಿ. ನೀವು ಸಾಕ್ಷಿಯಾಗಿರುವ ಯಾವುದೇ ಚುನಾವಣಾ ಸಂಬಂಧಿತ ಉಲ್ಲಂಘನೆಗಳ ಫೆÇೀಟೋಗಳು ಅಥವಾ ವೀಡಿಯೊಗಳನ್ನು ಸೆರೆಹಿಡಿಯಿರಿ. ನಿಮ್ಮ ವರದಿಯನ್ನು ಅಪ್ಲಿಕೇಶನ್ ಮೂಲಕ ಅಪ್‍ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ.
ಸಿ-ವಿಜಿಲ್ ಆಪ್ ಕಾರ್ಯ ಹೇಗೆ?:
ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು ಫೋಟೋ ಮತ್ತು ವಿಡಿಯೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್‍ನಲ್ಲಿ ಅಪ್‍ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ.
ಏನೆಲ್ಲಾ ದೂರು ನೀಡಬಹುದು?:
ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೋರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೋಸ್ಟರ್, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದಾರಿತ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧಧದ ಅವಧಿಯಲ್ಲೂ ಪ್ರಚಾರ, ಮತದಾನದ ದಿನದಂದು ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್‍ನಲ್ಲಿ ದೂರು ಕೊಡಬಹುದು. ಒಟ್ಟು 16 ರೀತಿಯ ದೂರುಗಳನ್ನು ನೀಡಬಹುದು.
100 ನಿಮಿಷಗಳಲ್ಲಿ ಸಿಗಲಿದೆ ಉತ್ತರ:
ಆಪ್‍ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗೆ ಅಧಿಕಾರಿಗಳ ಉತ್ತರ ಸಿಗಲಿದೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ.
ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬಂಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೈಯಿಂಗ್ ಸ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ.
ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈಗಾಗಲೇ ಕಂಟ್ರೋಲ್ ರೂಂ ಮತ್ತು ಸಿ-ವಿಜಿಲ್ ತಂಡ ಕಾರ್ಯಗತವಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯ (ಮಾ.26)ವರೆಗೆ ಒಟ್ಟು 37 ದೂರುಗಳು ಸಿ-ವಿಜಿಲ್ ಮುಖಾಂತರ ದಾಖಲಾಗಿದ್ದು, 19 ಪ್ರಕರಣಗಳು ವಿಲೇ ಮಾಡಲಾಗಿದೆ.
‘ದೂರು ನೀಡುವಾಗ ದೂರುದಾರರ ಹೆಸರು, ವಿಳಾಸವನ್ನು ಗೌಪ್ಯವಾಗಿ ಇಡಲಾಗುತ್ತದೆ. ಚುನಾವಣೆ ಮುಗಿಯುವವರೆಗೂ ಮೂರು ಪಾಳಿಗಳಲ್ಲಿ 24 ಗಂಟೆಗೂ ಚುನಾವಣಾ ಸಿಬ್ಬಂದಿ ಕಾರ್ಯ ನಿರ್ವಹಿಸುವರು’ ಎಂದು ಜಿಲ್ಲಾ ಸಿ-ವಿಜಿಲ್ ನೋಡೆಲ್ ಅಧಿಕಾರಿಯಾದ ಸಕೀನಾ ಅವರು ತಿಳಿಸಿದ್ದಾರೆ.
‘ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಯುತವಾಗಿ ನಡೆಸಲು ಯಾವುದೇ ಚುನಾವಣೆ ಅಕ್ರಮ, ಆಮಿಷ ತಡೆಲು ಸಿವಿಜಿಲ್ ಬಳಸುವ ಮೂಲಕ ಎಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವದ ರಕ್ಷಕರಾಗೋಣ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.