Sarkari Naukri: 10ನೇ ತರಗತಿ ಪಾಸ್ ಆಗಿದ್ದರೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೆ ಸಿಗುತ್ತೆ ನೌಕರಿ

Defence Ministry Recruitment 2024: 10ನೇ ತರಗತಿ ಉತ್ತೀರ್ಣರಾದವರಿಗೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೇ ನೇರವಾಗಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. 

Written by - Yashaswini V | Last Updated : Mar 27, 2024, 10:49 AM IST
  • ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  • ಇದಕ್ಕಾಗಿ ಯಾವುದೇ ಲಿಖಿತ ಪರೀಕ್ಷೆಯನ್ನು ಆಯೋಜಿಸುವುದಿಲ್ಲ.
  • ಅರ್ಜಿ ಸಲ್ಲಿಸಿದ ನಂತರ, ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.
Sarkari Naukri: 10ನೇ ತರಗತಿ ಪಾಸ್ ಆಗಿದ್ದರೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೆ ಸಿಗುತ್ತೆ ನೌಕರಿ  title=

Defence Ministry Recruitment 2024: ನೀವು ಹತ್ತನೇ ತರಗತಿ ಉತ್ತೀರ್ಣರಾಗಿದ್ದರೆ ಯಾವುದೇ ಪರೀಕ್ಷೆಯಿಲ್ಲದೆ ನೇರವಾಗಿ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶವಿದೆ. ರಕ್ಷಣಾ ಸಚಿವಾಲಯವು ಅಗ್ನಿಶಾಮಕ ಸಿಬ್ಬಂದಿಯ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ mod.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿ, ಹುದ್ದೆಗಳ ವಿವರ, ವೇತನ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ನೇಮಕಾತಿ ಪ್ರಕ್ರಿಯೆ ಬಗ್ಗೆ ಇಲ್ಲಿದೆ ಮಾಹಿತಿ. 
 
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 
ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು 23 ಮೇ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ವಯೋಮಿತಿ: 
ರಕ್ಷಣಾ ಸಚಿವಾಲಯದ ಅಗ್ನಿಶಾಮಕ ಸಿಬ್ಬಂದಿಯ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯಸ್ಸು 56ವರ್ಷಕ್ಕಿಂತ ಹೆಚ್ಚಿರಬಾರದು. 

ಶೈಕ್ಷಣಿಕ ಅರ್ಹತೆ: 
ಮೊದಲೇ ತಿಳಿಸಿದಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು  ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ- 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ, ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಪೋಸ್ಟ್‌ಗಳ ವಿವರಗಳು: 
ಈ ನೇಮಕಾತಿಯ ಅಡಿಯಲ್ಲಿ, ಅರ್ಹ ಅಭ್ಯರ್ಥಿಗಳನ್ನು ಒಟ್ಟು 40 ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ರಕ್ಷಣಾ ಸಚಿವಾಲಯವು ಕಣ್ಣೂರು ಮತ್ತು ಕೊಚ್ಚಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. 

ವಲಯವಾರು ಹುದ್ದೆಗಳ ವಿವರ: 
ಕಣ್ಣೂರಿನ ಒಟ್ಟು ಹುದ್ದೆಗಳು- 02
ಕೊಚ್ಚಿಯಲ್ಲಿ ಲಭ್ಯವಿರುವ ಒಟ್ಟು ಹುದ್ದೆಗಳು- 38

ವೇತನ ವಿವರ: 
ಹಂತ 2 ರ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರೂ.ಗಳಿಂದ 63,200 ರೂ.ವರೆಗಿನ ವೇತನವನ್ನು ನೀಡಲಾಗುತ್ತದೆ.

ನೇಮಕಾತಿ ಪ್ರಕ್ರಿಯೆ?
ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕಾಗಿ ಯಾವುದೇ ಲಿಖಿತ ಪರೀಕ್ಷೆಯನ್ನು ಆಯೋಜಿಸುವುದಿಲ್ಲ. ಅರ್ಜಿ ಸಲ್ಲಿಸಿದ ನಂತರ, ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು. ಇದಕ್ಕಾಗಿ ಅಭ್ಯರ್ಥಿಗಳಿಗೆ ದಿನಾಂಕವನ್ನು ಮೊದಲೇ ತಿಳಿಸಲಾಗುವುದು.

ಇದನ್ನೂ ಓದಿ- ಶಿಕ್ಷಕರ ಎಡವಟ್ಟಿಗೆ ಬಾರದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಪ್ರವೇಶ ಪತ್ರ: ಪೋಷಕರ ಪ್ರತಿಭಟನೆ

ಅರ್ಹ, ಆಸಕ್ತ ಅಭ್ಯರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ: 
ರಕ್ಷಣಾ ಇಲಾಖೆಯಲ್ಲಿ ಲಭ್ಯವಿರುವ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಇದಕ್ಕಾಗಿ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ mod.gov.in ನಲ್ಲಿ ನೀಡಲಾದ ಫಾರ್ಮ್ಯಾಟ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಅದರ ಪ್ರಿಂಟ್ ಔಟ್ ತೆಗೆದುಕೊಂಡು,  ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ. ಬಳಿಕ ಎಲ್ಲಾ ಕಡ್ಡಾಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದ ಮೊದಲು ಸ್ಪೀಡ್ ಪೋಸ್ಟ್ ಮೂಲಕ ಆ ಅರ್ಜಿಯನ್ನು ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, {ಸ್ಟಾಫ್ ಆಫೀಸರ್ (ಸಿವಿಲಿಯನ್ ರಿಕ್ರೂಟ್‌ಮೆಂಟ್ ಸೆಲ್)} ಹೆಡ್‌ಕ್ವಾರ್ಟರ್ಸ್ ಸದರ್ನ್ ನೇವಲ್ ಕಮಾಂಡ್ ನೇವಲ್ ಬೇಸ್, ಕೊಚ್ಚಿ – 682004 ಗೆ ಕಳುಹಿಸಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News