ವಿಂಟೇಜ್ ಕಾರು-ಬೈಕ್’ಗಳ ರ್ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ

ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದ್ದು, ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

Written by - Bhavishya Shetty | Last Updated : Mar 31, 2024, 07:32 PM IST
    • ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ
    • ವಿಂಟೇಜ್ ಕಾರು ಹಾಗೂ ಬೈಕ್ ಗಳ ರ್ಯಾಲಿ ಕಾರ್ಯಕ್ರಮ
    • ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ
ವಿಂಟೇಜ್ ಕಾರು-ಬೈಕ್’ಗಳ ರ್ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ title=
Vote Awareness

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವಿಂಟೇಜ್ ಕಾರು ಹಾಗೂ ಬೈಕ್ ಗಳ ರ್ಯಾಲಿ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.

ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದ್ದು, ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಸಂಗೀತ ಕುರ್ಚಿಯಂತಾದ ಪಾಕ್ ಕ್ರಿಕೆಟ್ ಮಂಡಳಿ! ಶಾಹಿನ್ ಕೈಬಿಟ್ಟು ಮತ್ತೆ ಬಾಬರ್’ಗೆ ನಾಯಕತ್ವ

ವಿಂಟೇಜ್ ಕಾರುಗಳು ಹಾಗೂ ದ್ವಿಚಕ್ರ ವಾಹನಗಳು ರ‍್ಯಾಲಿ ಮಾಡುವ ಮೂಲಕ ಲೋಕ ಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

 ನಗರ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶೇಖಡಾವಾರು ಮತದಾನ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ತಳಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿ ಸ್ವೀಕಾರ:

ಲೋಕಸಭಾ ಚುನಾವಣೆ ಹಿನ್ನೆಲೆ ವಿಂಟೇಜ್ ಕಾರು ರ್ಯಾಲಿ ವೇಳೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಜ್ಙಾ ವಿಧಿಯನ್ನು ಬೋಧಿಸಿದರು. ಸ್ಥಳದಲ್ಲಿ ನೆರೆದಿದ್ದವರೆಲ್ಲರೂ ಪ್ರತಿಜ್ಙಾ ವಿಧಿಯನ್ನು ಸ್ವೀಕರಿಸಿದರು.

ವಿಂಟೇಜ್ ಕಾರು ಹಾಗೂ ಬೈಕ್ ಗಳ ರ್ಯಾಲಿ ಸಾಗಿದ ಹಾದಿ:

ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ನಿಂದ ಪ್ರಾರಂಭವಾಗಿ ಇನ್ಫೆಂಟ್ರಿ ರಸ್ತೆ, ಎಂ.ಜಿ ರಸ್ತೆ(ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮೂಲಕ), ಟ್ರಿನಿಟಿ ವೃತ್ತ, ರೆಸಿಡೆನ್ಸಿ ರಸ್ತೆ ಮೂಲಕ ಕಂಠೀರವ ಕ್ರೀಡಾಂಗಣದ ಬಳಿ ರ್ಯಾಲಿ ಮುಕ್ತಾಯವಾಯಿತು.

ಇದನ್ನೂ ಓದಿ: ಎಳನೀರಿಗೆ ಈ ಬೀಜ ಬೆರೆಸಿ ಕುಡಿದರೆ ಯಾವತ್ತೂ ಹೆಚ್ಚಾಗಲ್ಲ ಬ್ಲಡ್ ಶುಗರ್! ಆದ್ರೆ ಕುಡಿಯುವ ಸಮಯ ಇದೇ ಆಗಿರಲಿ

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News