ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಗಾಗಿ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬೆನ್ನಲ್ಲೇ ಈಗ ರಾಜ್ಯದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ನೀಡುವಂತೆ ಆಗ್ರಹಿಸಿದ್ದಾರೆ.
ಸಾವರ್ಕರ್ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಶಿಪಾರಸ್ಸು ಮಾಡಿದ ಬೆನ್ನಲ್ಲೇ ದೇಶದೆಲ್ಲೆಡೆ ಈಗ ಪರ ವಿರೋಧದ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಅಸಾದುದ್ದೀನ್ ಒವೈಸಿ ಆಕ್ಷೇಪ ವ್ಯಕ್ತಪಡಿಸುತ್ತಾ, ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆ ಸಂಚಿನಲ್ಲಿ ಸಾವರ್ಕರ್ ಕೂಡ ಭಾಗಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಬದಲು ಭಗತ್ ಸಿಂಗ್, ರಾಜಗುರು, ಸುಖದೇವ್ ರಂತಹ ಕ್ರಾಂತಿಕಾರಿಗಳಿಗೆ ಭಾರತ ರತ್ನ ನೀಡಿ ಎಂದು ಮನವಿ ಮಾಡಿದ್ದಾರೆ.
ಸಾರ್ವರ್ಕರ್ ಅವರಿಗೆ 'ಭಾರತ ರತ್ನ' ಆ ಮೇಲೆ ಕೊಡುವಿರಂತೆ,
ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ
ಮೊದಲು ಭಾರತರತ್ನ ನೀಡಿ.
ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ.@INCKarnataka— Siddaramaiah (@siddaramaiah) October 18, 2019
ಈ ಚರ್ಚೆಯ ಮಧ್ಯೆ ನಡೆದಾಡುವ ದೇವರು ಎಂದೇ ಖ್ಯಾತರಾದ ಸಿದ್ದಗಂಗಾ ಮಠದ ಡಾ.ಶಿವಕುಮಾರ್ ಸ್ವಾಮಿಜಿಗಳಿಗೆ ಭಾರತ ನೀಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು 'ಸಾರ್ವರ್ಕರ್ ಅವರಿಗೆ 'ಭಾರತ ರತ್ನ' ಆ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ' ಎಂದು ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.