ಬೆಂಗಳೂರು: ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಸೋಮವಾರದಿಂದ (ಏಪ್ರಿಲ್ 1) ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.
ನೋಂದಣಿ ಕಾರ್ಯ ಮುಗಿದ ೨೦ ದಿನಗಳ ಬಳಿಕ ಸರ್ಕಾರ ರೈತರಿಂದ ಕೊಬ್ಬರಿ ಖರೀದಿಗೆ ಮುಂದಾಗಿದ್ದು, ಏಕಕಾಲಕ್ಕೆ ಖರೀದಿ ನಡೆಯಲಿದೆ. ಖರೀದಿ ಕೇಂದ್ರಗಳಲ್ಲಿ ಅಧಿಕಾರಿಗಳು, ಗ್ರೇಡರ್ಗಳು, ತೂಕದ ಯಂತ್ರ, ಕೊಬ್ಬರಿ ತೂಂಬಲು ಬೇಕಾದ ಚೀಲಗಳು, ಸಂಗ್ರಹಕ್ಕೆ ಗೋದಾಮು ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: USB Charger Scam: ಸಾರ್ವಜನಿಕ ಸ್ಥಳದಲ್ಲಿ ಅಪ್ಪಿತಪ್ಪಿಯೂ ಸ್ಮಾರ್ಟ್ಫೋನ್ ಚಾರ್ಜ್ ಮಾಡಬೇಡಿ..!
ಮಾರ್ಚ್ 9ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು, 9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ ಎಂದು ಹೇಳಲಾಗಿದೆ.
ಒಂದು ಕೇಂದ್ರದಲ್ಲಿ ದಿನವೊಂದಕ್ಕೆ ೧೦೦ ಕ್ವಿಂಟಲ್ನಿಂದ ೧೫೦ ಕ್ವಿಂಟಲ್ ಕೊಬ್ಬರಿ ಖರೀದಿಸಲಾಗುತ್ತದೆ. ಪ್ರತಿದಿನ ೧೦-೧೫ ರೈತರು ಕೊಬ್ಬರಿ ಮಾರಾಟ ಮಾಡಬಹುದಾಗಿದೆ. ಈಗಾಗಲೇ ನೋಂದಣಿಯಾಗಿರುವ ಕೇಂದ್ರಗಳಲ್ಲಿಯೇ ಖರೀದಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಇದನ್ನೂ ಓದಿ: ರಾಷ್ಟ್ರಪತಿ ಭವನದಲ್ಲಿಂದು ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಪ್ರಧಾನ ಮಾಡಿದ ರಾಷ್ಟ್ರಪತಿ
ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿಂದ ಕೊಬ್ಬರಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ. ಹಾಸನ ಸೇರಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.