ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಿನ್ನೆ INDIA ಮೈತ್ರಿಕೂಟದ ಸಮಾವೇಶ ನಡೀತು.. ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿದವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಭಾಗಿಯಾಗಿದ್ದರು..