ಬೆಂಗಳೂರು : ಉತ್ತರಖಂಡ ಚುನಾವಣಾ ಪ್ರಚಾರದ ವೇಳೆ ಡಿ.ಕೆ.ಸುರೇಶ್ ಅವರ ದೇಶವಿಭಜನೆ ಹೇಳಿಕೆ ಬಗ್ಗೆ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. “ದೇಶ ವಿಭಜನೆ ಬಗ್ಗೆ ಯಾರೂ ಮಾತನಾಡಿಲ್ಲ.ತೆರಿಗೆ ಅನ್ಯಾಯವಾದರೆ ಈ ಬಗ್ಗೆ ಜನ ಆಲೋಚನೆ ಮಾಡುವಂತಹ ಪರಿಸ್ಥಿತಿ ಬರಬಹುದು ಎಂದು ಸುರೇಶ್ ಅವರು ಹೇಳಿದ್ದಾರೆ. ಡಿ.ಕೆ.ಸುರೇಶ್ ನೆನಪಿಸಿಕೊಂಡಿದ್ದಕ್ಕೆ ಮೋದಿ ಅವರಿಗೆ ಅಭಿನಂದನೆಗಳು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ.
ಬೆಂಗಳೂರು ನಗರದಲ್ಲಿ ಇಂಡಿಯಾ ಜನ್ಮತಾಳಿತು.ಈ ದೇಶದಲ್ಲಿ ಬದಲಾವಣೆ ಅನಿವಾರ್ಯ ಎಂದು ಮನಗಂಡು ಇಂಡಿಯಾ ಒಕ್ಕೂಟವನ್ನು ರಚನೆ ಮಾಡಲಾಯಿತು.ಕರ್ನಾಟಕದಲ್ಲಿ ಈ ಬದಲಾವಣೆ ಉಂಟಾಯಿತು.ನಂತರ ಅನೇಕ ಕಡೆ ಚುನಾವಣೆ ನಡೆಯಿತು.ಸೋಲು, ಗೆಲುವು ಎರಡನ್ನು ಕಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಸುಮಾರು 10 ಪಕ್ಷಗಳು ಒಟ್ಟಿಗೆ ಸೇರಿ ಚುನಾವಣೆಯನ್ನು ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಅಮಿತ್ ಶಾ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?
2019 ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಮತು ದಳ ಒಟ್ಟಾಗಿ ಚುನಾವಣೆ ಎದುರಿಸಿದ್ದೆವು.ತುಮಕೂರಿನಲ್ಲಿ ಸಿಪಿಐ 17 ಸಾವಿರ ಮತಗಳಿಸಿತ್ತು. ದೇವೇಗೌಡರು 12 ಸಾವಿರ ಮತಗಳಿಂದ ಸೋಲು ಕಂಡಿದ್ದರು. ಈ ರೀತಿಯ ವಿಂಗಡಣೆ ಆಗಬಾರದು ಎನ್ನುವುದು ನಮ್ಮೆಲ್ಲರ ಉದ್ದೇಶ. ಒಟ್ಟಾಗಿ ಎನ್ ಡಿಎ ಸೋಲಿಸಬೇಕು ಎಂಬುದು ನಮ್ಮ ಏಕೈಕ ಉದ್ದೇಶ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ.ಇದನ್ನು ನಾವೆಲ್ಲಾ ಬಲವಾಗಿ ಖಂಡಿಸುತ್ತೇವೆ. ಬೂತ್ ಮಟ್ಟದಿಂದ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ಚುನಾವಣಾ ಬಾಂಡ್ ವಿಚಾರದಲ್ಲಿ ಬಿಜೆಪಿ ಲೆಕ್ಕವೇ ಕೊಡುತ್ತಿಲ್ಲ. ಐಟಿ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ನೀಡಿದೆ. ಕಮ್ಯನಿಷ್ಟ್ ಪಕ್ಷಕ್ಕೆ 11 ಕೋಟಿ ವಿಚಾರವಾಗಿ ನೋಟಿಸ್ ನೀಡಿದ್ದಾರೆ.ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದ ಮೋದಿಯವರು ಇದಕ್ಕೆ ಉತ್ತರ ಕೊಡಬೇಕು.ಅಮಿತ್ ಷಾ ರಾಜ್ಯಕ್ಕೆ ಬಂದಿದ್ದಾರೆ. ಬರ ಪರಿಹಾರದ ವಿಚಾರವಾಗಿ ಏನನ್ನೂ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ: ಸಿಎಂ ಸಿದ್ದರಾಮಯ್ಯ
ನಮ್ಮ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ಆದರೆ ಇತರೇ ಸಮೀಕ್ಷೆಗಳ ಪ್ರಕಾರ 28 ಸ್ಥಾನಗಳನ್ನೂ ನಾವು ಗೆಲ್ಲುತ್ತೇವೆ.ಎಲ್ಲಾ ಮಿತ್ರ ಪಕ್ಷಗಳನ್ನು ಸೇರಿಸಿ ಸಮನ್ವಯ ಸಮಿತಿ ರಚಿಸಲಾಗುವುದು.ಎಲ್ಲಾ ಮಿತ್ರ ಪಕ್ಷಗಳು ಪ್ರತಿ ಕ್ಷೇತ್ರದಲ್ಲೂ ನಮಗೆ ಬೆಂಬಲ ನೀಡುತ್ತೇವೆ ಎಂದು ಲಿಖಿತವಾಗಿ ಬರೆದುಕೊಟ್ಟಿವೆ.ಈ ಸಹಕಾರಕ್ಕೆ ಮುಖ್ಯಮಂತ್ರಿಗಳು ಹಾಗೂ ಎಲ್ಲರ ಪರವಾಗಿ ಅಭಿನಂದನೆ ತಿಳಿಸುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.