" ಅಮಿತ್ ಶಾ ಅವರೇ ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ"

 ಸನ್ಮಾನ್ಯ ಗೃಹಸಚಿವ ಅಮಿತ್ ಶಹಾ ಅವರೇ,ನಿರೀಕ್ಷಿಸಿದಂತೆಯೇ ರಾಜ್ಯದಲ್ಲಿ ನಿಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಸುಳ್ಳುಗಳ ಮೂಲಕವೇ ಉದ್ಘಾಟಿಸಿದ್ದೀರಿ, ಇದಕ್ಕಾಗಿ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Written by - Zee Kannada News Desk | Last Updated : Apr 3, 2024, 05:02 AM IST
  • ಅಮಿತ್ ಶಹಾ ಅವರೇ, ನೀವು ಕೊಟ್ಟ ಒಂದು ವಾರದ ಆಶ್ವಾಸನೆಯ ನಂತರ ಮೂರು ತಿಂಗಳುಗಳು ಉರುಳಿಹೋಗಿದೆ.
  • ಈಗ ರಾಜ್ಯಕ್ಕೆ ಬಂದು ಕರ್ನಾಟಕಕ್ಕೆ ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ.
  • ಜಾಗೃತ ಕನ್ನಡಿಗರು ನಿಮ್ಮ ಸುಳ್ಳಿಗೆ ಬಲಿಯಾಗುವುದಿಲ್ಲ, ಅವರಿಗೆ ಸತ್ಯ ಗೊತ್ತಿದೆ.
" ಅಮಿತ್ ಶಾ ಅವರೇ ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ" title=
file photo

ಬೆಂಗಳೂರು: ಸನ್ಮಾನ್ಯ ಗೃಹಸಚಿವ ಅಮಿತ್ ಶಹಾ ಅವರೇ,ನಿರೀಕ್ಷಿಸಿದಂತೆಯೇ ರಾಜ್ಯದಲ್ಲಿ ನಿಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಸುಳ್ಳುಗಳ ಮೂಲಕವೇ ಉದ್ಘಾಟಿಸಿದ್ದೀರಿ, ಇದಕ್ಕಾಗಿ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಕುರಿತಾಗಿ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ 'ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಬರಪರಿಹಾರ ಕೋರಿ ಮನವಿ ಸಲ್ಲಿಸಿತ್ತು. ಅಷ್ಟರಲ್ಲಿ ಚುನಾವಣೆ ಘೋಷಣೆಯಾಗಿರುವ ಕಾರಣ ಪರಿಹಾರ ನೀಡಲು ಸಾಧ್ಯವಾಗಿಲ್ಲ’’ ಎಂಬ ಅಪ್ಪಟ ಸುಳ್ಳನ್ನು  ರಾಮನಗರದಲ್ಲಿ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ನೀವು ಹೇಳಿದ್ದೀರಿ. ಈ ಸುಳ್ಳನ್ನು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ಕುಟುಕಲಿಲ್ಲವೇ? ಎಂದು ಪ್ರಶ್ನಿಸಿದರು

ಈ ನಿಮ್ಮ ಸುಳ್ಳಿಗೆ ನಿಮಗೆ ಇಷ್ಟವಾಗಿರುವ ‘’ಕ್ರೊನಾಲಜಿ’’ಯಲ್ಲಿಯೇ ಉತ್ತರ ನೀಡುತ್ತೇನೆ. ನೀವೂ ಸ್ವಲ್ಪ ಕ್ರೊನಾಲಜಿಯನ್ನು ಅರ್ಥ ಮಾಡಿಕೊಳ್ಳಿ.( ಆಪ್ ಬೀ ಝರಾ ಕ್ರೊನಾಲಜಿ ಸಮಜಿಯೇ). ನಾನು ನಿಮ್ಮ ಮುಂದೆ ಇಡುವ ಸತ್ಯವನ್ನು ಸುಳ್ಳೆಂದು ನೀವು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಾನು ನಿವೃತ್ತಿಯಾಗುತ್ತೇನೆ. ನಿಮಗೆ ನಿಮ್ಮ ಮಾತನ್ನು ಸತ್ಯ ಎಂದು ಸಾಬೀತು ಮಾಡಲಾಗದಿದ್ದರೆ ನೀವೇನು ಮಾಡಬೇಕೆಂದು ನೀವೇ ನಿರ್ಧರಿಸಿ ಎಂದು ಸವಾಲು ಹಾಕಿದರು.

ಇದನ್ನೂ ಓದಿ- Lok Sabha Election 2024: "ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ"

ಮಳೆ ಅಭಾವದ ಸೂಚನೆ ಸಿಗುತ್ತಿದ್ದಂತೆಯೇ ಜಾಗೃತಗೊಂಡ ರಾಜ್ಯ ಸರ್ಕಾರ  ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿರುವ ಪ್ರಕೃತಿ ವಿಕೋಪ ಸಂಪುಟ ಉಪಸಮಿತಿಯ  ಮೊದಲ ಸಭೆ ನಡೆಸಿದ್ದು 2023ರ ಆಗಸ್ಟ್ 22ರಂದು. ಆ ಸಭೆ  ರಾಜ್ಯದ 116 ತಾಲೂಕುಗಳಲ್ಲಿ ಬರಪೀಡಿತವಾಗಿರುವುದನ್ನು ದಾಖಲಿಸಿತ್ತು. ಅದರ ನಂತರ ಸೆಪ್ಟೆಂಬರ್ 22 ರ ವರೆಗೆ ಇದೇ ಸಂಪುಟ ಉಪಸಮಿತಿ ನಾಲ್ಕು ಬಾರಿ ಸಭೆ ನಡೆಸಿ ರಾಜ್ಯದ ಬರಗಾಲದ ಪರಿಸ್ಥಿತಿಯನ್ನು ಪರಿಶೀಲಿಸಿ ಅಂತಿಮವಾಗಿ ಮುಖ್ಯಮಂತ್ರಿಯಾಗಿರುವ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಯಿತು.

ರಾಜ್ಯದ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯ ನಡೆಸಲು ಎನ್ ಡಿಆರ್ ಎಫ್ ನಿಂದ ರೂ.4860 ಕೋಟಿ ನೀಡಬೇಕೆಂಬ ಮೊದಲ ಮನವಿಯನ್ನು ರಾಜ್ಯ ಸರ್ಕಾರ  ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಸಲ್ಲಿಸಿದ್ದು 2023ರ ಸೆಪ್ಟೆಂಬರ್ 22ರಂದು.ಈ ಮನವಿಗೆ ಪ್ರತಿಕ್ರಿಯಿಸಿ ಕೇಂದ್ರ ಸರ್ಕಾರದ ಹತ್ತು ಸದಸ್ಯರ ತಜ್ಞರ ತಂಡ  2023ರ ಅಕ್ಟೋಬರ್ ನಾಲ್ಕರಿಂದ ಒಂಬತ್ತರ ವರೆಗೆ ರಾಜ್ಯದ ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅಧ್ಯಯನ ನಡೆಸಿತ್ತು .ಅದರ ನಂತರ ರಾಜ್ಯದ ಬರಪರಿಸ್ಥಿತಿಯ ಮೇಲೆ ನಿರಂತರವಾಗಿ ನಿಗಾ ಇಡುತ್ತಾ ಬಂದಿರುವ ರಾಜ್ಯದ ಸಂಪುಟ ಉಪಸಮಿತಿ ಅಕ್ಟೋಬರ್ ತಿಂಗಳಲ್ಲಿ ನಾಲ್ಕು ಬಾರಿ ಮತ್ತು ಸೆಪ್ಟೆಂಬರ್ ನಲ್ಲಿಒಂದು ಬಾರಿ ಸಭೆ ನಡೆಸಿ ಅಂತಿಮವಾಗಿ ರಾಜ್ಯದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತವಾಗಿವೆ ಎಂದು ಘೋಷಿಸಿತು. ಬರಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯ ನಡೆಸಲು ಎನ್ ಡಿಆರ್ ಎಫ್ ನಿಂದ ರೂ.18,171.44 ಕೋಟಿ ನೀಡಬೇಕೆಂಬ ಮನವಿಯನ್ನೊಳಗೊಂಡ ವಿವರವಾದ ಪತ್ರವನ್ನು ರಾಜ್ಯ ಸರ್ಕಾರ ಕೇಂದ್ರ ಕೃಷಿ ಸಚಿವರಿಗೆ 2023ರ ನವಂಬರ್ 15ರಂದು ನಾನೇ ಬರೆದಿದ್ದೆ.ನವಂಬರ್ 23ರಂದು ರಾಜ್ಯದ ಕಂದಾಯ ಸಚಿವರು ಮತ್ತು ಕೃಷಿ ಸಚಿವರು ಕೇಂದ್ರ ಹಣಕಾಸು ಸಚಿವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಬರಪರಿಹಾರ ಬಿಡುಗಡೆಮಾಡುವಂತೆ ಕೋರಿದ್ದರು.

ಇದರ ನಂತರವೂ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕವಾಗದೆ ಇದ್ದುದನ್ನು ಕಂಡು 2023ರ ಡಿಸೆಂಬರ್ 19ರಂದು ಮುಖ್ಯಮಂತ್ರಿಯಾದ ನಾನು ಕಂದಾಯ ಸಚಿವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವರಾದ ನಿಮ್ಮನ್ನು ಭೇಟಿ ಮಾಡಿ ಬರಪರಿಹಾರಕ್ಕಾಗಿ ಮನವಿ ಮಾಡಿದ್ದೆವು. ಆ ಭೇಟಿಯ ಸಮಯದಲ್ಲಿ ತಾವು ಒಂದು ವಾರದೊಳಗೆ ತಮ್ಮ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿಯ ಸಭೆ ನಡೆಸಿ ಎನ್ ಡಿಆರ್ ಎಫ್ ನಿಂದ ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ನೀವು ಆಶ್ವಾಸನೆ ನೀಡಿದ್ದೀರಿ' ಎಂದು ಹೇಳಿದರು.

ಇದನ್ನೂ ಓದಿ- ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ: ಸಿಎಂ ಸಿದ್ದರಾಮಯ್ಯ

ಅಮಿತ್ ಶಹಾ ಅವರೇ, ನೀವು ಕೊಟ್ಟ ಒಂದು ವಾರದ ಆಶ್ವಾಸನೆಯ ನಂತರ ಮೂರು ತಿಂಗಳುಗಳು ಉರುಳಿಹೋಗಿದೆ. ಈಗ ರಾಜ್ಯಕ್ಕೆ ಬಂದು ಕರ್ನಾಟಕಕ್ಕೆ ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ. ಜಾಗೃತ ಕನ್ನಡಿಗರು ನಿಮ್ಮ ಸುಳ್ಳಿಗೆ ಬಲಿಯಾಗುವುದಿಲ್ಲ, ಅವರಿಗೆ ಸತ್ಯ ಗೊತ್ತಿದೆ.ಈಗಲೂ ಕಾಲ ಮಿಂಚಿಲ್ಲ ಬರಪೀಡಿತರ ಬದುಕಿನ ಜೊತೆ ಕೊಳಕು ರಾಜಕೀಯ ಮಾಡಲು ಹೋಗದೆ ತಕ್ಷಣ ಬರಪರಿಹಾರವನ್ನು ಬಿಡುಗಡೆ ಮಾಡಿ. ಇದಕ್ಕೆ ತಪ್ಪಿದ್ದಲ್ಲಿ ರಾಜ್ಯದ ಆರುವರೆ ಕೋಟಿ ಕನ್ನಡಿಗರು ಇದೇ ಲೋಕಸಭಾ ಚುನಾವಣೆಯಲ್ಲಿ ನೀವು ಹೇಳಿರುವ ಸುಳ‍್ಳಿಗೆ ಮತ್ತು ರಾಜ್ಯದ ಜನತೆಗೆ ನಿಮ್ಮ ಸರ್ಕಾರ ಮಾಡಿರುವ ದ್ರೋಹಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News