ಚಂಡೀಗಡ: ಇಲ್ಲಿನ ಮಹಾರಾಜ ಯದವಿಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ಟೂರ್ನಿಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.
A Fantastic Finish 🔥
Plenty happened in this nail-biter of a finish where the two teams battled till the end🤜🤛
Relive 📽️ some of the drama from the final over ft. Jaydev Unadkat, Ashutosh Sharma & Shashank Singh 👌
Watch the match LIVE on @starsportsindia and @JioCinema… pic.twitter.com/NohAD2fdnI
— IndianPremierLeague (@IPL) April 9, 2024
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ ಗಳಿಗೆ ಕಟ್ಟಿಹಾಕಿತು.ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸನ್ ರೈಸರ್ಸ್ ತಂಡದ ಪರವಾಗಿ ನಿತೀಶ್ ರೆಡ್ಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಅವರು ಕೇವಲ 37 ಎಸೆತಗಳಲ್ಲಿ 64 ರನ್ ಗಳಿಸುವ ಮೂಲಕ ತಂಡವನ್ನು ಸುಸ್ಥಿತಿಗೆ ತರುವಲ್ಲಿ ಯಶಸ್ವಿಯಾದರು.
ಸನ್ ರೈಸರ್ಸ್ ತಂಡವು ನೀಡಿದ 183 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 180 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಪಂಜಾಬ್ ಕಿಂಗ್ಸ್ ಪರವಾಗಿ ಶಶಾಂಕ್ ಸಿಂಗ್ 25 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದಾಗಿ ಅಜೇಯ 46 ರನ್ ಗಳಿಸಿದರೂ ಸಹ ತಂಡವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ವಿಫಲರಾದರು. ಅಂತಿಮವಾಗಿ ಸನ್ ರೈಸರ್ಸ್ ತಂಡವು ಎರಡು ರನ್ ಗಳ ಅಂತರರಿಂದ ರೋಚಕ ಗೆಲುವು ಸಾಧಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.