ಮೈಸೂರು: ಮೈಸೂರು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ದಲಿತ ಸಮಾಜದ ಮುಖಂಡರ ಸಮಾವೇಶವನ್ನು ಇಂದು ಮೈಸೂರಿನ ಸರಸ್ವತಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್ ಮುನಿಯಪ್ಪ ಉದ್ಘಾಟಿಸಿದರು.
ಇದನ್ನೂ ಓದಿ: Cricket Recharge Plan ಪರಿಚಯಿಸಿದ Jio !ಸಿಗಲಿದೆ ಇಷ್ಟೆಲ್ಲಾ ಪ್ರಯೋಜನ !
ಈ ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಾವು ನೀಡಿದ್ದ ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ನಮಗೆ ಅಕ್ಕಿಯನ್ನು ಕೊಡಲು ನಿರಾಕರಿಸಿತು. ಆದರೂ ನಾವು ಜನರಿಗೆ ಮಾತು ನೀಡಿದ್ದೇವೆ, ಅದರಂತೆ 5ಕೆಜಿ ಅಕ್ಕಿಗೆ ಹಣವನ್ನು ನೇರ ನಗದು ವರ್ಗಾವಣೆ ಮಾಡುವ ಮೂಲಕ ಜನರಿಗೆ ತಲುಪಿಸುತ್ತಿದ್ದೇವೆ ಎಂದರು.
ಕೇಂದ್ರದಲ್ಲಿ 2013 ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ರವರ ನೇತೃತ್ವದಲ್ಲಿ ನ್ಯಾಷನಲ್ ಫುಡ್ ಸೆಕ್ಯುರಿಟಿ ಆಕ್ಟ್ ಅನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಪಕ್ಷಕ್ಕಿದೆ. ನಾವು ಸರ್ಕಾರದಲ್ಲಿದ್ದಾಗ ಯಾವ ರಾಜ್ಯಕ್ಕೂ ಬೇಧ-ಭಾವ ಮಾಡದೆ ಸರಿಸಮನಾಗಿ ಅನುಕೂಲಗಳನ್ನು ತಲುಪಿಸಿದ್ದೇವೆ. ಆದರೆ ಮೋದಿಯವರ ಸರ್ಕಾರ ನಮಗೆ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡಿತು. ನಮ್ಮ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ರವರ ನೇತೃತ್ವದಲ್ಲಿ ಜನಸಾಮಾನ್ಯರಿಗೆ ಶಕ್ತಿಯನ್ನು ತುಂಬಲು 25 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ ಎಂದರು.
ನಮ್ಮ ಪಕ್ಷ ಯಾವುದೇ ಜಾತಿ ಧರ್ಮ ಬೇಧವಿಲ್ಲದೆ ಎಲ್ಲಾ ವರ್ಗದವರಿಗೆ ಅವಕಾಶಗಳನ್ನು ಕಲ್ಪಿಸುತ್ತಿದ್ದೇವೆ. ಮೈಸೂರು ಮತ್ತು ಚಾಮರಾಜನಗರ ಎರಡು ಕ್ಷೇತ್ರದಲ್ಲಿ ಸುನಿಲ್ ಬೋಸ್ ಮತ್ತು ಎಂ.ಲಕ್ಷ್ಮಣ್ ರವರನ್ನು ತಾವು ಹೆಚ್ಚಿನ ಪ್ರಮಾಣದಲ್ಲಿ ಮತವನ್ನು ನೀಡಿ ಗೆಲ್ಲಿಸಿ ಕೊಡಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದರು.
ನಮ್ಮ ಸರ್ಕಾರ ನೀಡಿರುವ ಈ 5 ಗ್ಯಾರಂಟಿ ಯೋಜನೆಗಳು ಸುಮಾರು ನಾಲ್ಕು ಕೋಟಿಗೂ ಹೆಚ್ಚು ಜನರಿಗೆ ತಲುಪಿವೆ ನಮಗೆ ಆಶಾಭಾವನೆ ಇದೆ. ಈ ಬಾರಿ 28 ಕ್ಷೇತ್ರಗಳಲ್ಲಿಯೂ ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲುವನ್ನು ಸಾಧಿಸುತ್ತಾರೆ ಎಂದರು.
ಇದನ್ನೂ ಓದಿ: ಈ ಹಣ್ಣು ಮಧುಮೇಹಕ್ಕೆ ವರದಾನ: ಬ್ಲಡ್ ಶುಗರ್ ಕಂಟ್ರೋಲ್ ತಪ್ಪದಂತೆ ನೋಡಿಕೊಳ್ಳುತ್ತೆ!
ಕೇಂದ್ರ ಸರ್ಕಾರ 10 ವರ್ಷಗಳ ಆಡಳಿತದಲ್ಲಿ ರೈತರ ಪರವಾಗಿ ಯಾವೊಂದು ಯೋಜನೆಯನ್ನು ನೀಡಲಿಲ್ಲ ಮತ್ತು ರೈತರ ಸಾಲಮನ್ನಾ ಮಾಡಲಿಲ್ಲ. ವಿಷೇಶವಾಗಿ ಜನಸಾಮಾನ್ಯರಿಗೆ ಅರಿವಿದೆಮ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.