/kannada/photo-gallery/smartphones-selling-for-just-8k-in-amazon-great-indian-festival-bumper-sale-249412 ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು! ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು! 249412

ದೆಹಲಿಯಲ್ಲಿ ವಾಯು ಮಾಲಿನ್ಯ: ಶಾಲೆಗಳಲ್ಲಿ ಹೊರಾಂಗಣ ಚಟುವಟಿಕೆ ಸ್ಥಗಿತಗೊಳಿಸಲು ಸರ್ಕಾರ ಸೂಚನೆ

ದೆಹಲಿಯಲ್ಲಿ ವಾಯು ಮಾಲಿನ್ಯ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ.

Last Updated : Oct 31, 2019, 10:00 AM IST
ದೆಹಲಿಯಲ್ಲಿ ವಾಯು ಮಾಲಿನ್ಯ: ಶಾಲೆಗಳಲ್ಲಿ ಹೊರಾಂಗಣ ಚಟುವಟಿಕೆ ಸ್ಥಗಿತಗೊಳಿಸಲು ಸರ್ಕಾರ ಸೂಚನೆ title=

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಈ ಬಗ್ಗೆ ಮಾತನಾಡಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿಯಲ್ಲಿ ವಾಯು ಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

"ಕಲುಷಿತ ವಾತಾವರಣದಲ್ಲಿ ಹೊರಾಂಗಣ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳುವುದರಿಂದ ಅವರ ಆರೋಗ್ಯದ ಮೇಲೆ ದೀರ್ಘಕಾಲೀನ ಹಾನಿಕಾರಕ ಪರಿಣಾಮ ಬೀರಬಹುದು. ತೀವ್ರ ಮಾಲಿನ್ಯದ ಸ್ಥಿತಿ ಮುಂದುವರಿಯುವವರೆಗೆ ಶಾಲೆಗಳಲ್ಲಿ ಯಾವುದೇ ಹೊರಾಂಗಣ ಚಟುವಟಿಕೆಗಳನ್ನು ಆಯೋಜಿಸದಂತೆ ನೋಡಿಕೊಳ್ಳಲು ಎಲ್ಲಾ ಸರ್ಕಾರಿ ಮುಖ್ಯಸ್ಥರು ಮತ್ತು ಖಾಸಗಿ ಶಾಲೆಗಳಿಗೆ ನಿರ್ದೇಶಿಸಲಾಗಿದೆ" ಎಂದು ಶಿಕ್ಷಣ ನಿರ್ದೇಶನಾಲಯವು ಶಾಲೆಗಳಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಪೋಷಕರು ತಮ್ಮ ಮಕ್ಕಳಿಗೆ ಮಾಸ್ಕ್ ಧರಿಸಿ ತರಗತಿಗಳಿಗೆ ಕಳುಹಿಸುವಂತೆ ಸಲಹೆ ನೀಡಲಾಗಿದ್ದು, ವಿಶೇಷ ಅಗತ್ಯವಿರುವ ಮಕ್ಕಳು ಮತ್ತು ವೈದ್ಯಕೀಯ ಅಥವಾ ಉಸಿರಾಟದ ಸಮಸ್ಯೆಗಳಿರುವ ವಿದ್ಯಾರ್ಥಿಗಳು ಶಾಲೆಗೇ ಗೈರಾಗಲು ಅನುಮತಿ ನೀಡಲಾಗಿದೆ.