Dwarakish Real Name: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ. ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದವರು. ದ್ವಾರಕೀಶ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19ರಂದು ಜನಿಸಿದರು. ಇವರ ನಿಜವಾದ ಹೆಸರು ಬಂಗಲೆ ಶಾಮ ರಾವ್ ದ್ವಾರಕನಾಥ. ಸಿನಿರಂಗದಲ್ಲಿ ದ್ವಾರಕೀಶ್ ಎಂದೇ ಖ್ಯಾತರಾದರು.
1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ ದ್ವಾರಕೀಶ್ ಅವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಗ್ರಿ ಪಡೆದರು. ಬಳಿಕ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಅನ್ನು ದ್ವಾರಕೀಶ್ ಆರಂಭಿಸಿದರು. ನಂತರ ಇಟ್ಟಿಗೆ ವ್ಯಾಪಾರ ಕಾರ್ಖಾನೆ ಶುರು ಮಾಡಿದರು. ಇಷ್ಟೆಲ್ಲ ಮಾಡಿದರೂ ದ್ವಾರಕೀಶ್ ಅವರನ್ನು ಬಣ್ಣದ ಲೋಕ ಸೆಳೆಯುತ್ತಿತ್ತು. ನಟನೆಯಲ್ಲಿ ದ್ವಾರಕೀಶ್ ಅಪಾರ ಆಸಕ್ತಿ ಹೊಂದಿದ್ದರು. ಈ ಹಿನ್ನೆಲೆ 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ದ್ವಾರಕೀಶ್ ಸಿನಿರಂಗಕ್ಕೆ ಎಂಟ್ರಿಕೊಟ್ಟರು.
ಇದನ್ನೂ ಓದಿ: Dwarakish Passes Away: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ
ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ದ್ವಾರಕೀಶ್ ನಟಿಸಿದ್ದಾರೆ. 1969 ರಲ್ಲಿ ಡಾ.ರಾಜ್ಕುಮಾರ್ ನಟನೆಯ ಮೇಯರ್ ಮುತ್ತಣ್ಣ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಸ್ಯಾಂಡಲ್ವುಡ್ ನಿರ್ಮಾಪಕರಾದರು. ಮೇಯರ್ ಮುತ್ತಣ್ಣ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೂಪರ್ ಹಿಟ್ ಆಯಿತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ದ್ವಾರಕೀಶ್ ನಿರ್ಮಿಸಿದರು. ದ್ವಾರಕೀಶ್ ಇದು ವರೆಗೂ 40ಕ್ಕೂ ಹೆಚ್ಚು ಸಿನಿಮಾಗಳನ್ನು ಪ್ರೊಡ್ಯೂಸ್ ಮಾಡಿದ್ದಾರೆ. ನಿರ್ಮಾಪಕರಾಗಿ ಹಲವು ಪ್ರತಿಭೆಗಳನ್ನು ಕನ್ನಡಿಗರಿಗೆ ಪರಿಚಯಿಸಿದ್ದಾರೆ.
ಬಳಿಕ 1985 ರಲ್ಲಿ ದ್ವಾರಕೀಶ್ ಸಿನಿಮಾ ನಿರ್ದೇಶಕರಾದರು. ʻನೀ ಬರೆದ ಕಾದಂಬರಿʼ ಎಂಬ ಚಿತ್ರವನ್ನು ನಿರ್ದೇಶಿಸುವ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟರು. ಡಾನ್ಸ್ ರಾಜ ಡಾನ್ಸ್, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಹೀಗೆ 15ಕ್ಕೂ ಹೆಚ್ಚು ಚಿತ್ರಗಳನ್ನು ದ್ವಾರಕೀಶ್ ನಿರ್ದೇಶಿಸಿದ್ದಾರೆ. ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ದ್ವಾರಕೀಶ್ ನಿರ್ಮಿಸಿದ್ದಾರೆ.
ಇದನ್ನೂ ಓದಿ: Rajkumar Remuneration: ಒಂದೆರಡಲ್ಲ 100 ಸಿನಿಮಾ ಮಾಡಿದ್ರೂ ಡಾ.ರಾಜ್ಕುಮಾರ್ ಪಡೆಯುತ್ತಿದ್ದ ಸಂಭಾವನೆ ಇಷ್ಟು..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.