ನವದೆಹಲಿ: ಛತ್ತೀಸ್ಗಢದಲ್ಲಿ ಮಾವೋವಾದಿ ಹಿರಿಯ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್ಗಢದ ಈ ಅತಿದೊಡ್ಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಬಿನಗುಂದ ಗ್ರಾಮದ ಬಳಿಯ ಹಪಟೋಲಾ ಅರಣ್ಯದಲ್ಲಿ ಗಡಿ ಭದ್ರತಾ ಪಡೆ (BSF) ಮತ್ತು ರಾಜ್ಯ ಪೊಲೀಸ್ ಜಿಲ್ಲಾ ಮೀಸಲು ಪಡೆ (DRG) ಈ ಜಂಟಿ ಕಾರ್ಯಚರಣೆ ನಡೆಸಿವೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮಂಗಳವಾರ ಮಧ್ಯಾಹ್ನ ನಡೆದ ಎನ್ಕೌಂಟರ್ನಲ್ಲಿ ಹಿರಿಯ ಬಂಡಾಯ ನಾಯಕ ಶಂಕರ್ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. AK-47 ಮತ್ತು INSAS ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: Ram Navami : ಚುನಾವಣಾ ಪ್ರಚಾರದ ಮಧ್ಯೆಯು 'ಸೂರ್ಯ ತಿಲಕ' ಭಾವನಾತ್ಮಕ ಕ್ಷಣ ವೀಕ್ಷಿಸಿದ ಮೋದಿ
On specific #BSF_Intelligence, a monumental blow to Naxalism. #BSF & DRG eliminated 29 Naxals including top Naxal commander Shankar Rao in a targeted operation in #Kanker #Chhattisgarh. Large number of weapons were also recovered. #BSFKillsShankarRao #NaxalFreeBharat pic.twitter.com/O0VAVMvlUW
— BOLLYWOOD GOSSIPS (@bolly_goss) April 17, 2024
ಗಾಯಗೊಂಡ ಮೂವರ ಪೈಕಿ ಇಬ್ಬರು ಬಿಎಸ್ಎಫ್ನವರಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಆದರೆ DRG ಸಿಬ್ಬಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಉನ್ನತ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಒಂದು ನಿಮಿಷದ ವಿಡಿಯೋದಲ್ಲಿ ಭದ್ರತಾ ಸಿಬ್ಬಂದಿ ಕಾಡಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಫಲ್ನಿಂದ ಮಾವೋವಾದಿಗಳ ಮೇಲೆ ಗುಂಡು ಹಾರಿಸಲಾಗಿದೆ. ಈ ವೇಳೆ ಜೀವ ಉಳಿಸಿಕೊಳ್ಳಲು ಅವರು ಕೂಗಾಡುತ್ತಾ ಕಾಡಿನಲ್ಲಿ ಓಡಾಡಿದ್ದಾರೆ. ಈ ಘಟನೆಯನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ರಾಷ್ಟ್ರಪತಿ ಪ್ರಶಸ್ತಿ ವಿಜೇತ ಲಕ್ಷ್ಮಣ್ ಕೇವತ್ ಅವರು ಈ ಎನ್ಕೌಂಟರ್ನಲ್ಲಿ ಭಾಗಿಯಾಗಿದ್ದ ತಂಡದ ನೇತೃತ್ವ ವಹಿಸಿದ್ದರು.
ಇದನ್ನೂ ಓದಿ: ISRO : ಭಾರತೀಯರು ಚಂದ್ರನ ಮೇಲೆ ಇಳಿಯುವವರೆಗೂ ಚಂದ್ರಯಾನ ಮುಂದುವರಿಯಲಿದೆ : ಇಸ್ರೋ ಅಧ್ಯಕ್ಷ
ಇವರು ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿಯಾಗಿದ್ದು, ಇದುವರೆಗೆ 44 ಮಾವೋವಾದಿಗಳನ್ನು ಕೊಂದಿದ್ದಾರೆ. ಛತ್ತೀಸ್ಗಢದ ಸಿಎಂ ವಿಷ್ಣು ದೇವ್ಸಾಯಿ ಅವರು ಈ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮಾವೋವಾದಿ ಮುಕ್ತ ಬಸ್ತಾರ್ ಪ್ರದೇಶಕ್ಕೆ ಕರೆ ನೀಡಿದ್ದು, ಪ್ರತಿಜ್ಞೆ ಮಾಡಿದ್ದಾರೆ. ಫೆಬ್ರವರಿಯಲ್ಲಿ ಕಂಕೇರ್ನಲ್ಲಿಯೇ ನಡೆದ ಎನ್ಕೌಂಟರ್ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.