ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯ

Lok Sabha Election 2024: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.‌ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Manjunath N | Last Updated : Apr 18, 2024, 07:33 PM IST
  • ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ
  • ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ
  • ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು
ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯ title=

ಚಿಕ್ಕಬಳ್ಳಾಪುರ: ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ "ಪ್ರಜಾಧ್ವನಿ-2" ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗರಿಷ್ಠ ಅಂತರದಿಂದ ಗೆಲ್ಲಿಸಿಕೊಡುವಂತೆ ಕರೆನೀಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.‌ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ

ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ "ಪ್ರಜಾಧ್ವನಿ-2" ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗರಿಷ್ಠ ಅಂತರದಿಂದ ಗೆಲ್ಲಿಸಿಕೊಡುವಂತೆ ಕರೆನೀಡಿದರು.

ಪ್ರಧಾನಿ ಮೋದಿ ಅವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ.ಕೊಟ್ಟ ಮಾತು ಈಡೇರಿಸದ ಬಿಜೆಪಿ ಪಕ್ಷಕ್ಕೆ ಮತ್ತು ಅವರ ಜೊತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎನ್ನುವುದು ದೇವೇಗೌಡರ ಭ್ರಮೆ‌. ಐದು ವರ್ಷವೂ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ : ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ ! 

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ರೈತರ ಕಷ್ಟಕ್ಕೆ ಸ್ಪಂದಿಸಲಿದೆ.ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುತ್ತೇವೆ.ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿ ರೈತರ ಕೈ ಹಿಡಿಯುತ್ತೇವೆ.ಬಿಜೆಪಿ ಶ್ರೀಮಂತರ 16 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮನ್ನಾ ಮಾಡಿದೆ. ಆದರೆ ನಾವು ಇಡೀ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ.ಇದೇ ಮಾದರಿಯ 25 ಗ್ಯಾರಂಟಿಗಳು ಜಾರಿಯಾಗಲಿವೆ ಎಂದು ಭರವಸೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News