ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!

Harshika Poonacha Husband Bhuvan Ponnanna Injured: ಕುಟುಂಬ ಸಮೇತ ಆಚೆ ತೆರಳಿದಾಗ ನಡೆದ ಕಹಿ ಅನುಭವವನ್ನು ನಟಿ ಹರ್ಷಿಕಾ ಪೂಣಚ್ಚ ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ನಟ ಭುವನ್​ ಪೊನ್ನಣ್ಣ ಗಾಯಗೊಂಡಿದ್ದಾರೆ. 

Written by - Chetana Devarmani | Last Updated : Apr 19, 2024, 10:41 AM IST
    • ಹರ್ಷಿಕಾ ಪೂಣಚ್ಚ ಇದ್ದ ಕಾರಿನ ಮೇಲೆ ಹಲ್ಲೆ
    • ʻಕನ್ನಡʼ ಮಾತನಾಡಿದ್ದಕ್ಕೆ ಕಾರಿನ ಮೇಲೆ ಅಟ್ಯಾಕ್
    • ನಟ ಭುವನ್​ ಪೊನ್ನಣ್ಣಗೆ ಗಾಯ
ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!   title=

Attack On Actress Harshika Poonacha Car: ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್​ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ. ಕುಟುಂಬ ಸಮೇತ ಆಚೆ ತೆರಳಿದಾಗ ನಡೆದ ಕಹಿ ಅನುಭವವನ್ನು ನಟಿ ಹರ್ಷಿಕಾ ಪೂಣಚ್ಚ ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ನಟ ಭುವನ್​ ಪೊನ್ನಣ್ಣ ಗಾಯಗೊಂಡಿದ್ದಾರೆ. 

ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಚ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೆ ಬಿಟ್ಟು ಬಿಡಲು ಯೋಚಿಸಿದೆ. ಆದರೆ ನನ್ನ ಅನುಭವದಿಂದ ಮತ್ತಿತರರಿಗೆ ಸಹಾಯ ಆಗಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ ಎಂದಿದ್ದಾರೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಡಿನ್ನರ್ ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡರು. ನಿಮ್ಮ ವಾಹನ ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದರೆ ಅದು ನಮಗೆ ತಾಕಬಹುದು ಎಂದು ವಾದಿಸಲು ಪ್ರಾರಂಭಿಸಿದರು ಎಂದು ಹರ್ಷಿಕಾ ಹೇಳಿದ್ದಾರೆ.   

ಇದನ್ನೂ ಓದಿ: ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?

ನನ್ನ ಪತಿ (ನಟ ಭುವನ್‌ ಪೊನ್ನಣ್ಣ) ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದರು. ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಓಡಿಸಿದೆವು. ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು. ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು.  2 - 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 - 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು.  ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು  ಹಿಡಿದಿಟ್ಟುಕೊಂಡು ನನಗೆ ಕೊಟ್ಟರು. ಅಷ್ಟೊತ್ತಿಗಾಗಲೇ ಇಡೀ ಗ್ಯಾಂಗ್‌  ಕಾರಿಗೆ ಹಾನಿ ಮಾಡಿ, ನಮ್ಮ ಮೇಲೂ ಅಟ್ಯಾಕ್‌ ಮಾಡಲು ಪ್ರಯತ್ನಿಸಿದರು ಎಂದಿದ್ದಾರೆ.

ನಮ್ಮ ವಾಹನದಲ್ಲಿ ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. "ಯೇ ಲೋಕಲ್ ಕನ್ನಡ್ ವಾಲಾ ಹೇ" (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ಎನ್ನುತ್ತಿದ್ದರು. ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು. ನಿಮ್ಮ "ಕನ್ನಡ ಸ್ಟೈಲ್" ನ್ನು ನೀವೇ ಇಟ್ಟುಕೊಳ್ಳಿ ಎಂದರು. ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಅರ್ಧಂಬರ್ಧ ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಹೇಳಿದ್ದಾರೆ.

ನಾನು ಇನ್ಸ್‌ಪೆಕ್ಟರ್‌ಗೆ ಕೂಡಲೇ ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಅಲ್ಲಿಂದ ತೆರಳಿದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಕೆಲವೇ ಸೆಕೆಂಡುಗಳಲ್ಲಿ ಕಣ್ಮರೆಯಾದರು. ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಹತ್ತಿರದ ಪೊಲೀಸ್ ಠಾಣೆಯ ASI ಉಮೇಶ್ ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

ಇದನ್ನೂ ಓದಿ: Shilpa Shetty: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ED ಬಿಗ್‌ ಶಾಕ್‌.. 98 ಕೋಟಿ ಮೌಲ್ಯದ ಆಸ್ತಿ ಜಪ್ತಿ ! 

ಪೊಲೀಸ್‌ ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದರು. ಅವರಿಗೆ ಅಲ್ಲಿ ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವೂ ಇಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು.  ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇಂತಹ ತೊಂದರೆಗೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ. ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ ಎಂದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ. 

ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

 1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಗಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ??
 2. ನಮ್ಮ ಊರು ಬೆಂಗಳೂರಿನಲ್ಲಿ ನನ್ನ ಭಾಷೆ ಕನ್ನಡವನ್ನು ಬಳಸುವುದು ತಪ್ಪಾ???
 3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
 4. ಇಲ್ಲಿಯೇ ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?

ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ. ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ ಎಂದು ಬರೆ ನಟಿ ಹರ್ಷಿಕಾ ಪೂಣಚ್ಚ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News