ಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Murder in Hubballi: ಇದು ಕೇವಲ ವಯಕ್ತಿಕ ಘಟನೆಯಲ್ಲಿ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ.ಕರ್ನಾಟಕವನ್ನು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ.ಈ ಸರ್ಕಾರದ ಅವಧಿಯಲ್ಲಿ ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ.ಗದಗನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ.

Written by - Prashobh Devanahalli | Edited by - Manjunath N | Last Updated : Apr 19, 2024, 11:03 AM IST
  • ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ
  • ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ
  • ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ
ಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  title=

Murder in Hubballi: ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ  ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಟನ್‌ಗಟ್ಟಲೇ ಬಂಗಾರ ಹೊಂದಿರುವ ನಟಿ ಖುಷ್ಬೂ ಒಟ್ಟು ಆಸ್ತಿ ಎಷ್ಟಿದೆ ಗೊತ್ತೆ..? ಕೇಳಿದ್ರೆ ಶಾಕ್‌ ಆಗ್ತೀರಾ

ಅವರು ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದ ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೆಲೆ ಹಲ್ಲೆಯಾಗಿದೆ. ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗುಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭಿರವಾಗಿ ಪರಿಣಗಿಸಬೇಕು. ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನೂ ಓದಿ: ಸ್ಟಾರ್‌ ಹಿರೋಯಿನ್‌ಗಳನ್ನೂ ಮೀರಿಸುವ ಅಂದಗಾರ್ತಿ ನಟ ಅರ್ಜುನ್‌ ಸರ್ಜಾ 2ನೇ ಪುತ್ರಿ..!

ಇದು ಕೇವಲ ವಯಕ್ತಿಕ ಘಟನೆಯಲ್ಲಿ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ.ಕರ್ನಾಟಕವನ್ನು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ.ಈ ಸರ್ಕಾರದ ಅವಧಿಯಲ್ಲಿ ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ.ಗದಗನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನುವ ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್ ಐ ಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ.ಅಪರಾಧ ವಿಭಾಗದ ಡಿಜಿಪಿ ಅವರು ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News