ಬೆಂಗಳೂರು : “ನಮ್ಮ ಖಾಲಿ ಚೊಂಬು ಜಾಹೀರಾತಿನಿಂದ ಪ್ರತಿಪಕ್ಷಗಳ ನಾಯಕರು ಎಚ್ಚರಗೊಂಡಿದ್ದಾರೆ.ನಮ್ಮ ಜನರಿಗೆ ಯಾವುದು ಸರಿ,ಯಾವುದು ತಪ್ಪು ಎಂದು ಯೋಚನೆ ಮಾಡುವ ಶಕ್ತಿ, ಪ್ರಜ್ಞೆ ಎರಡೂ ಇದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದಿನ ಪತ್ರಿಕೆಗಳಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ನೀಡಿರುವ ಜಾಹೀರಾತಿನ ಬಗ್ಗೆ ಮಾತನಾಡಿದ ಅವರು, “ಕರ್ನಾಟಕದ ಜನರಿಗೆ ಬಿಜೆಪಿ ಬಹಳ ಅನ್ಯಾಯ ಮಾಡಿದೆ ಎಂದು ಈ ಹಿಂದೆ ದೇವೇಗೌಡರು, ಕುಮಾರಸ್ವಾಮಿ ಇಬ್ಬರೂ ಭಾಷಣ ಮಾಡಿದ್ದರು. 15 ಲಕ್ಷ ಹಣ ಎಷ್ಟು ಜನರ ಖಾತೆಗೆ ಹೋಗಿದೆ?ಎಷ್ಟು ಉದ್ಯೋಗ ಸಿಕ್ಕಿದೆ ಎಂದು ನಾನು, ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ನಾಯಕರು ಪ್ರಶ್ನೆ ಮಾಡುತ್ತಿದ್ದೇವೆ. ಇದಕ್ಕೆ ಮೊದಲು ಉತ್ತರಿಸಲಿ” ಎಂದು ಹೇಳಿದರು.
ಇದನ್ನೂ ಓದಿ : ಬಡವರು, ಮಧ್ಯಮವರ್ಗದವರ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ, ಯೋಚಿಸಿ ನಿರ್ಧರಿಸಿ: ಸಿಎಂ ಕರೆ
ಬಿಜೆಪಿಯವರು ಚಿಪ್ಪು ಅಭಿಯಾನ ಮಾಡುತ್ತಿದ್ದಾರೆ ಎಂದಾಗ “ನಾವು ಚಿಪ್ಪು ಕೊಟ್ಟಿಲ್ಲ. ಕನ್ನಡದ ಬಾವುಟ ಹಿಡಿದು ಹೋರಾಟ ಮಾಡುವವರು ನಾವು, ಕನ್ನಡಿಗರ ಪರವಾಗಿ ನಮ್ಮ ತೆರಿಗೆ,ನಮ್ಮ ಹಕ್ಕು ಹೋರಾಟ ಮಾಡಿದ್ದೇವೆ” ಎಂದರು.
ದೇಶದಲ್ಲಿ ಎಲ್ಲರೂ ಸಮಾನರು ಎಂಬ ಅರಿವು ಪ್ರಧಾನಿಗಳಿಗೆ ಇರಬೇಕು ಎಂದು ಹೇಳಿದರು. ಸಂವಿಧಾನವನ್ನು ಕೈಯಲ್ಲಿ ಹಿಡಿದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರಿಗೆ ಈ ದೇಶದ ಎಲ್ಲಾ ನಾಗರಿಕರು ಸಮಾನರು ಎನ್ನುವ ಅರಿವು ಇರಬೇಕು.ಬೇಧ,ಭಾವ ಮಾಡುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲ. ಇದು ಇಡೀ ದೇಶ ಮತ್ತು ಪ್ರಪಂಚಕ್ಕೆ ಕೆಟ್ಟ ಸಂದೇಶವನ್ನು ನೀಡಿದಂತಾಗುತ್ತದೆ” ಎಂದರು.
ಇದನ್ನೂ ಓದಿ : ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಸ್ಲಿಮರಿಗೆ ಬಿಜೆಪಿಯಿಂದ ಮಾನಸಿಕ ಹಿಂಸೆ :
“ನಮ್ಮದು ಸರ್ವ ಜನಾಂಗದ ತೋಟ. ಮುಸ್ಲಿಂ ಧರ್ಮಿಯರಿಗೆ ಚಿತ್ರಹಿಂಸೆ ನೀಡಿ ಈ ದೇಶ ಬಿಟ್ಟು ಹೋಗಬೇಕು ಎನ್ನುವಂತಹ ವಾತಾವರಣ ಬಿಜೆಪಿ ನಿರ್ಮಾಣ ಮಾಡುತ್ತಿದೆ.ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ.ನಾವು ಸಂವಿಧಾನದ ಪ್ರಕಾರ ನಡೆಯುತ್ತಿದ್ದೇವೆ.ಆದ ಕಾರಣ ಯಾವುದೇ ಅಪರಾಧ ಪ್ರಕರಣ ನಡೆದರೂ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ” ಎಂದರು.
ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದಾಗ “ಪಾಪಾ ಅವರುಗಳು ಯಾವ ಕೆಲಸವನ್ನೂ ಮಾಡಿಲ್ಲವಲ್ಲ ಅದಕ್ಕೆ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ.ಈ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಫೇಲ್ ಆಯಿತು.ಈಗ ದೊಡ್ಡ ಎಂಜಿನ್ ಕೂಡಾ ಫೇಲ್ ಆಗುತ್ತದೆ”ಎಂದು ವ್ಯಂಗ್ಯವಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.