ಬೆಂಗಳೂರು: ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲವೆಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಸೋಮವಾರ ಮಾಧ್ಯಮ ಹೇಳಿಕ ಬಿಡುಗಡೆ ಮಾಡಿರುವ, ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ನೀಡಿದರೆ ಡೇಂಜರ್ ಆಗುತ್ತವೆಯೇ?. ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲವೆಂದು ಟೀಕಿಸಿದ್ದರು.
ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧ ಡಾ.ರವೀಂದ್ರ ವಾಗ್ದಾಳಿ
ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ನೀಡಿದರೆ ಡೇಂಜರ್ ಆಗುತ್ತವೆಯೇ? ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ. ದೇಶಕ್ಕೆ @BJP4India ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ.#ಮಾಧ್ಯಮಹೇಳಿಕೆ
— Siddaramaiah (@siddaramaiah) April 22, 2024
ಕಾನೂನು ಪ್ರಕಾರ ಐಟಿ, ಇಡಿ ಸಂಸ್ಥೆಗಳು ದಾಳಿ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ? ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ಗಳು ಏಕೆ ಆಗುತ್ತಿಲ್ಲ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾನೂನು ಪ್ರಕಾರ ಐಟಿ, ಇಡಿ ಸಂಸ್ಥೆಗಳು ದಾಳಿ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ? ಯಡಿಯೂರಪ್ಪ, ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ?#ಮಾಧ್ಯಮಹೇಳಿಕೆ
— Siddaramaiah (@siddaramaiah) April 22, 2024
ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ!
ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ @BJP4India ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು.
ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ. 2/2#DroughtReliefFund
— Siddaramaiah (@siddaramaiah) April 22, 2024
ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಹೇಳಿದೆ. ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಬಿಜೆಪಿ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.