Rosted Chana With Jaggery Benefits: ಬದಲಾದ ಜೀವನಶೈಲಿಯ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಬಹುತೇಕ ರೋಗಗಳು ನಮ್ಮನ್ನು ಆವರಿಸಿಕೊಳ್ಳುತ್ತಿವೆ. ಇಂದಿನ ಹಾಳಾದ ಜೀವನಶೈಲಿಯು ಆ ರೋಗಗಳನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಹೀಗಿರುವಾಗ ನಿಮ್ಮನ್ನು ನೀವು ಫಿಟ್ ಆಗಿಟ್ಟುಕೊಳ್ಳಲು ಬಯಸುತ್ತಿದ್ದರೆ, ನಿಮ್ಮ ಆಹಾರ ಮತ್ತು ಜೀವನಶೈಲಿಯು ಅತ್ಯುತ್ತಮವಾಗಿರಬೇಕು ಎಂಬುದನ್ನು ನೀವು ನೆನಪಿನಲ್ಲಿಟ್ಟುಕೊಲ್ಲಬೇಕು. ಪಾಶ್ಚಿಮಾತ್ಯ ಆಹಾರಗಳಿಂದಾಗಿ, ಪೋಷಕಾಂಶಗಳ ಕೊರತೆಯಿಂದಾಗಿ ಜನರು ವಿವಿಧ ರೋಗಗಳಿಗೆ ಗುರಿಯಾಗುತ್ತಿದ್ದಾರೆ. ಅನೇಕ ಜನರಲ್ಲಿ ರಕ್ತಹೀನತೆಯ ಸಮಸ್ಯೆ ಎದುರಾಗುತ್ತದೆ. ಹೀಗಿರುವಾಗ ಜನರು ವಿವಿಧ ರೀತಿಯ ದುಬಾರಿ ಔಷಧಿಗಳನ್ನು ಸೇವಿಸುತ್ತಿದ್ದಾರೆ, ಆದರೆ ನಿಮ್ಮ ಮನೆಯ ಅಡುಗೆಮನೆಯಲ್ಲಿ ಸಿಗುವ ಎರಡು ಪದಾರ್ಥಗಳನ್ನು ಬಳಸಿ ನೀವೂ ಕೂಡ ಈ ರಕ್ತ ಹೀನತೆಯ ಸಮಸ್ಯೆಯನ್ನು ನಿವಾರಿಸಬಹುದು.
ಬೆಲ್ಲ ಮತ್ತು ಕಾಬೂಲಿ ಕಡಲೆ ರಕ್ತದ ಕೊರತೆಯನ್ನು ನಿವಾರಿಸುತ್ತವೆ
ಸಾಕಷ್ಟು ಓಡಾಟದಿಂದ ಕೂಡಿದ ಇಂದಿನ ಜೀವನಶೈಲಿಯಲ್ಲಿ, ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸುವುದನ್ನು ಮರೆತುಬಿಟ್ಟಿದ್ದಾರೆ. ಇದರಿಂದಾಗಿ ಅವರು ಅನೇಕ ರೋಗಗಳ ಹಿಡಿತದಲ್ಲಿ ಸಿಳುಕಿಕೊಲ್ಲುತ್ತಿದ್ದಾರೆ. ರಕ್ತದ ಕೊರತೆಯು ಒಂದು ಸಾಮಾನ್ಯ ಸಂಗತಿಯಾಗಿದೆ, ನೀವು ಸಹ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಹುರಿದ ಕಡಲೆ ಮತ್ತು ಬೆಲ್ಲವು ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಬೆಲ್ಲದಲ್ಲಿ ಕಬ್ಬಿಣವು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ರಕ್ತಹೀನತೆಯ ವಿರುದ್ಧ ಪರಿಣಾಮವನ್ನು ಮನೆಮದ್ದಾಗಿದೆ. ಕಾಳುಗಳೊಂದಿಗೆ ಇದನ್ನು ತಿನ್ನುವುದರಿಂದ ಕಬ್ಬಿಣ ಮತ್ತು ಪ್ರೊಟೀನ್ ಎರಡರ ಕೊರತೆ ನೀಗುತ್ತದೆ.
ಇದನ್ನೂ ಓದಿ-ಬೇಸಿಗೆಯಲ್ಲಿ ಕೂದಲು ಮತ್ತು ತ್ವಚೆಯ ಸಮಸ್ಯೆಗಳಿಗೆ ರಾಮಬಾಣ ಈ ಎಲೆ, ಬಳಸುವ ವಿಧಾನ ಇಲ್ಲಿದೆ!
ಈ ಕಾಯಿಲೆಗಳನ್ನು ಕೂಡ ನಿವಾರಿಸುತ್ತವೆ
ವಯಸ್ಸಾದಂತೆ, ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆ, ಇದರಿಂದಾಗಿ ಮೂಳೆಗಳು ದುರ್ಬಲಗೊಳ್ಳುತ್ತವೆ. ಬೆಲ್ಲ ಮತ್ತು ಕಾಬೂಲಿ ಕಡಲೆಯನ್ನು ಆಹಾರದಲ್ಲಿ ಶಾಮೀಳುಗೊಲಿಸಿದರೆ ಕ್ಯಾಲ್ಸಿಯಂ ಕೊರತೆ ನೀಗುತ್ತದೆ ಮತ್ತು ಮೂಳೆಗಳು ಬಲಗೊಳ್ಳುತ್ತವೆ. ಪೊಟ್ಯಾಸಿಯಮ್ ಸಹ ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ಪ್ರತಿದಿನ ಮಲಬದ್ಧತೆಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಇದರಲ್ಲಿರುವ ಫೈಬರ್ ನಿಮ್ಮ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-Blood Sugar Control: ಮಧುಮೇಹ ನಿಯಂತ್ರಣಕ್ಕೆ ಈ ವಿಶೇಷ ಹಣ್ಣುಗಳನ್ನು ಒಮ್ಮೆ ಸೇವಿಸಿ ನೋಡಿ!
(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.