Election Commission Notice to Narendra Modi: ಕೇಂದ್ರ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಆಯೋಗವು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ, ವಿಶೇಷವಾಗಿ ಸ್ಟಾರ್ ಪ್ರಚಾರಕರ ನಡವಳಿಕೆಯ ಪ್ರಾಥಮಿಕ ಜವಾಬ್ದಾರಿಯನ್ನು ಹೊರಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಉನ್ನತ ಸ್ಥಾನದಲ್ಲಿರುವವರ ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಆಯೋಗ ತಿಳಿಸಿದೆ. ನೋಟಿಸ್ ಪ್ರಕಾರ, ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 77 ರ ಅಡಿಯಲ್ಲಿ, 'ಸ್ಟಾರ್ ಕ್ಯಾಂಪೇನರ್' ಸ್ಥಾನಮಾನವು ಕಾನೂನುಬದ್ಧವಾಗಿ ಸಂಪೂರ್ಣವಾಗಿ ರಾಜಕೀಯ ಪಕ್ಷಗಳ ವ್ಯಾಪ್ತಿಯಲ್ಲಿದೆ ಮತ್ತು ಸ್ಟಾರ್ ಪ್ರಚಾರಕರು ತಮ್ಮ ಭಾಷಣದ ಗುಣಮಟ್ಟ ಕಾಯಬೇಕು.
ಇದನ್ನೂ ಓದಿ:ಮುಸ್ಲಿಮರಿಗೆ ಒಬಿಸಿ, ದಲಿತರಿಗೆ ಅನ್ಯಾಯ: ಕಾಂಗ್ರೆಸ್ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಆರೋಪ
ಇತ್ತೀಚೆಗೆ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಬಹುದು ಎಂದು ಹೇಳಿದ್ದರು. ಪ್ರಧಾನಿ ಮೋದಿಯವರ ಈ ಹೇಳಿಕೆಯ ನಂತರ ಕಾಂಗ್ರೆಸ್ ಪಕ್ಷದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಿಯವರು ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಆರಂಭಿಸಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆ ಚುನಾವಣಾ ಆಯೋಗ ಪ್ರಧಾನಿ ಮೋದಿಗೆ ನೋಟಿಸ್ ಜಾರಿ ಮಾಡಿದೆ.
ಇದೇ ವೇಳೆ ರಾಹುಲ್ ಗಾಂಧಿ ತಮ್ಮ ರ್ಯಾಲಿಗಳಲ್ಲಿ ಅನುಚಿತ ಭಾಷೆ ಬಳಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ರಾಹುಲ್ ಗಾಂಧಿ ತಮಿಳುನಾಡಿನಲ್ಲಿ ಭಾಷೆಯ ಆಧಾರದ ಮೇಲೆ ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಹುಲ್ ಗಾಂಧಿ ತಮ್ಮ ಭಾಷಣಗಳಲ್ಲಿ ಭಾಷೆಯ ಆಧಾರದ ಮೇಲೆ ಉತ್ತರ ಮತ್ತು ದಕ್ಷಿಣ ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ತನ್ನ ಲಿಖಿತ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಉತ್ತರ ನೀಡುವಂತೆ ಚುನಾವಣಾ ಆಯೋಗ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.