ದೆಹಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭೂಕಂಪನ

ದೆಹಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

Last Updated : Nov 19, 2019, 07:40 PM IST
ದೆಹಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭೂಕಂಪನ  title=
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರ ಬಿಂದು ಭಾರತ-ನೇಪಾಳ ಗಡಿಯ ಸಮೀಪದಲ್ಲಿತ್ತು. ಭೂಕಂಪವನ್ನು ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯಲ್ಲಿ ದಾಖಲಾಗಿದೆ ಎಂದು ವರದಿಯಾಗಿದೆ.

 

 

ಅಮೆರಿಕಾದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪದ ಕೇಂದ್ರ ಬಿಂದು ನೇಪಾಳದ ಖಪ್ತಾಡ್ ರಾಷ್ಟ್ರೀಯ ಉದ್ಯಾನದಲ್ಲಿದೆ ಎನ್ನಲಾಗಿದೆ. ಯುಎಸ್ ಏಜೆನ್ಸಿ ತನ್ನ ಮೌಲ್ಯಮಾಪನದಲ್ಲಿ, ಭೂಕಂಪದ ಕೇಂದ್ರಬಿಂದು ಭೂಮಿಯ 1.3 ಕಿ.ಮೀ ಆಳದಲ್ಲಿದೆ ಎಂದು ಹೇಳಿದೆ.

2015 ರಲ್ಲಿ, ತೀವ್ರ ಭೂಕಂಪನವು ನೇಪಾಳವನ್ನು ಧ್ವಂಸಮಾಡಿತು, ಸುಮಾರು 9,000 ಜನರನ್ನು ಬಲಿತೆಗೆದುಕೊಂಡಿತ್ತು. 

 

 

Trending News