"ಸಂಭವಾಮಿ ಯುಗೇಯುಗೇ" ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ರಿಲೀಸ್!!

Sambhawami Yugeyuge: ಶ್ರೀಕೃಷ್ಣ ಭಗವದ್ಗೀತೆಯಲ್ಲಿ "ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ.  ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ. 

Written by - YASHODHA POOJARI | Edited by - Savita M B | Last Updated : May 19, 2024, 01:20 PM IST
  • "ಸಂಭಾವಮಿ ಯುಗೇಯುಗೇ" ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
  • ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ ಮಾತೇ ಈ ಚಿತ್ರದ ಶೀರ್ಷಿಕೆ
"ಸಂಭವಾಮಿ ಯುಗೇಯುಗೇ" ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ರಿಲೀಸ್!! title=

 Motion Poster Release of Sambhawami Yugeyuge: ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ "ಸಂಭಾವಮಿ ಯುಗೇಯುಗೇ" ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ‌.   
                       
ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ.

ಇದನ್ನೂ ಓದಿ-Aishwarya Rai Bachchan: ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ಐಶ್ವರ್ಯಾ ರೈ ಬಚ್ಚನ್! ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್‌ ಪ್ರಾರ್ಥನೆ

 ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

 ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.    

ಇದನ್ನೂ ಓದಿ-‘ಬ್ಯಾಂಕ್ of ಭಾಗ್ಯಲಕ್ಷ್ಮಿ’ ಸಿನಿಮಾ ಪೋಸ್ಟರ್ ಬಿಡುಗಡೆಗೊಳಿಸಿದ ನಿರ್ದೇಶಕ ಸಿಂಪಲ್ ಸುನಿ

 "ಸಂಭಾವಮಿ ಯುಗೇಯಗೇ" ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ  ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.   

 ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ.  ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ.  ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News