ನವದೆಹಲಿ: ರಾಷ್ಟ್ರ ರಾಜಧಾನಿಯ ಝಾನ್ಸಿ ರಾಣಿ ರಸ್ತೆ ಮಾರುಕಟ್ಟೆಯಲ್ಲಿ ಭಾನುವಾರ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 43 ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಒಂದು ಡಜನ್ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರು ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ (LNJP) ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿಯಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ಗಾಯಾಳುಗಳಲ್ಲಿ ಓರ್ವ ವ್ಯಕ್ತಿಯು ಶೇಕಡಾ 50 ಕ್ಕಿಂತ ಹೆಚ್ಚು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದರು. ಇದಲ್ಲದೆ ಇತರ 8 ಜನರು ಉಸಿರುಗಟ್ಟುವಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯಲ್ಲಿ ಸುಮಾರು 15 ಜನರು ಗಾಯಗೊಂಡಿದ್ದಾರೆ ಎಂದವರು ಮಾಹಿತಿ ನೀಡಿದರು.
Delhi fire incident: Chief Minister of Delhi Arvind Kejriwal met the injured admitted at LNJP hospital #DelhiFire pic.twitter.com/zGH81wp1Qw
— ANI (@ANI) December 8, 2019
ಮ್ಯಾಜಿಸ್ಟ್ರೇಟ್ ತನಿಖೆಗೆ ಸೂಚನೆ:
ಇದಕ್ಕೂ ಮೊದಲು ಧಾನ್ಯ ಮಂಡಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಅರವಿಂದ್ ಕೇಜ್ರಿವಾಲ್, ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ 7 ದಿನಗಳೊಳಗೆ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. ವರದಿ ಬಂದ ಬಳಿಕ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದಲ್ಲದೆ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿರುವ ಮುಖ್ಯಮಂತ್ರಿ , ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ಈ ಘಟನೆಯನ್ನು ದುರಂತ ಎಂದು ಬಣ್ಣಿಸಿದ ಸಿಎಂ ಕೇಜ್ರಿವಾಲ್, ಅಗ್ನಿಶಾಮಕ ಸಿಬ್ಬಂದಿಯ ಸೇವೆಯನ್ನು ಅವರ ಅತ್ಯುತ್ತಮ ಸಾಧನೆ ಎಂದು ಬಣ್ಣಿಸಿದರು.
We have lost more than 40 innocent lives to the tragic fire. I've ordered a magisterial inquiry into its cause, no culprit will be spared
We can't bring back lost lives, but Delhi govt will provide ₹10 L assistance to families that lost their loved ones & ₹1 L for the injured. pic.twitter.com/SOT5kR9l5J
— Arvind Kejriwal (@ArvindKejriwal) December 8, 2019