ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ: ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

“2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

Written by - Prashobh Devanahalli | Edited by - Bhavishya Shetty | Last Updated : May 28, 2024, 05:20 PM IST
    • ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ
    • ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಪೂರೈಕೆ ಮಾಡಲಾಗಿದೆ
    • ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ: ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ title=
Sowing Seed Price Increase

ಬೆಂಗಳೂರು: ರಾಜ್ಯದಲ್ಲಿ ಬಿತ್ತನೆ ಬೀಜ ದರ ಹೆಚ್ಚಳದ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ಬೆಲೆ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Health Tips: ಒಂದು ದಿನದಲ್ಲಿ ಎಷ್ಟು ಚಿಯಾ ಸೀಡ್ಸ್ ಸೇವಿಸಬೇಕು..?

“2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಹಾರ ಧಾನ್ಯಗಳ‌ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ 40% ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಾಗಿ ನಾವು ಬಿತ್ತನೆ ಬೀಜಕ್ಕೆ ಶೇ 30% ದರ ಏರಿಸಿದ್ದೇವೆ. ಖರೀದಿ, ಗುಣಮಟ್ಟ ನಿಯಂತ್ರಣ, ಸಂಸ್ಕರಣೆ, ಪ್ರಯೋಗಾಲಯದಲ್ಲಿ ಪರೀಕ್ಷೆ, ಗ್ರೇಡಿಂಗ್, ದಾಸ್ತಾನು ಮಾಡುವುದು, ಸಾಗಾಟ, ಬೀಜ ಪ್ರಮಾಣೀಕರಣ, ಕಾರ್ಮಿಕರ ಕೂಲಿ‌ ಹಣ ಎಲ್ಲಾ ಸೇರಿಸಿ ಬಿತ್ತನೆ ಬೀಜದ ಮಾರಾಟ ದರ ನಿಗದಿಯಾಗುತ್ತದೆ” ಎಂದು ಹೇಳಿದ್ದಾರೆ.

“ಬಿತ್ತನೆ ಬೀಜವನ್ನು ಸರ್ಕಾರ ‌ಹಾಗೂ ಖಾಸಗಿ ಸಂಸ್ಥೆಗಳು ನೇರವಾಗಿ ರೈತ ಬೀಜೋತ್ಪಾದಕರಿಂದ ಖರೀದಿಸುತ್ತಿವೆ. ಬೆಲೆ ಹೆಚ್ಚಳದ ಲಾಭವೂ ರೈತ ಬೀಜೋತ್ಪಾದಕರಿಗೆ ವರ್ಗಾವಣೆ ಆಗುತ್ತಿದೆ. ಇದು ನಮ್ಮ ಸರ್ಕಾರ ಬಂದ ನಂತರ ಮಾಡಿರುವ ಖರೀದಿ‌ ಮಾರಾಟ ಪ್ರಕ್ರಿಯೆ ಅಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಅನುಸರಿಸಲಾದ ಕ್ರಮ ಮುಂದುವರೆಸಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಡಯಾಬಿಟಿಸ್ ರೋಗಿಗಳು ತಿನ್ನಬಹುದೇ ಬೆಲ್ಲ?ಈ ಬಗ್ಗೆ ತಜ್ಞರು ಹೇಳುವುದೇನು ಗೊತ್ತಾ ? 

“ನೆರೆಯ ಮಹಾರಾಷ್ಟ್ರದಲ್ಲಿಯೂ ನಮ್ಮ ರಾಜ್ಯಕ್ಕಿಂತ ಹೆಚ್ಚಿನ ದರ ನಿಗದಿ ಮಾಡಲಾಗಿದೆ ರಾಜ್ಯದಲ್ಲಿ ಅತೀ ಹೆಚ್ಚು ಬೆಳೆಯುವ ಶೇಂಗಾ ಬಿತ್ತನೆ ಬೀಜದ ಬೆಲೆ ಶೇ 1ರಷ್ಟು ಮಾತ್ರ ಏರಿಕೆಯಾಗಿದೆ. ಹಾಗೇ ಸೊಯಬೀನ್ ಬಿತ್ತನೆ ಬೀಜದ ಮಾರಾಟ ದರ ಶೇ 8% ಇಳಿಕೆಯಾಗಿದೆ. ರೈತರ ಹಿತ ನಮ್ಮ ಆದ್ಯತೆ” ಎಂದು ಸ್ಪಷ್ಟನೆ ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News