'ಈಶ್ವರಪ್ಪನವರನ್ನು ಕರ್ನಾಟಕದ ಅಡ್ವಾನಿ ಅಂತ ಕರಿತಿದ್ರು ಅಂತವರನ್ನ ಅದ್ವಾನ ಮಾಡಿದ್ರಲ್ಲ'

  ಈಶ್ವರಪ್ಪನವರನ್ನು ಕರ್ನಾಟಕದ ಅಡ್ವಾನಿ ಅಂತ ಕರಿತಿದ್ರು ಅಂತವರನ್ನ ಅದ್ವಾನ ಮಾಡಿದ್ರಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

Written by - Manjunath N | Last Updated : May 29, 2024, 03:30 PM IST
  • ಶಿವಮೊಗ್ಗದ ಇತಿಹಾಸದಲ್ಲಿ ಬಂಗಾರಪ್ಪ ಅವರು ಹಾಗೂ ಯಡಿಯೂರಪ್ಪ ಅವರನ್ನು ಮರೆಯಲು ಸಾಧ್ಯವಿಲ್ಲ
  • ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕದ ಮೂಲಕ ಹಳ್ಳಿ ಯುವಕರ, ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು
  • ಅಪ್ಪನ ಹಾದಿಯಂತೆ ಮಧು ಬಂಗಾರಪ್ಪ ಅವರು 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದಾರೆ
 'ಈಶ್ವರಪ್ಪನವರನ್ನು ಕರ್ನಾಟಕದ ಅಡ್ವಾನಿ ಅಂತ ಕರಿತಿದ್ರು ಅಂತವರನ್ನ ಅದ್ವಾನ ಮಾಡಿದ್ರಲ್ಲ' title=

ಬೆಂಗಳೂರು:  ಈಶ್ವರಪ್ಪನವರನ್ನು ಕರ್ನಾಟಕದ ಅಡ್ವಾನಿ ಅಂತ ಕರಿತಿದ್ರು ಅಂತವರನ್ನ ಅದ್ವಾನ ಮಾಡಿದ್ರಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಅವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಚರ್ಚೆ ಮಾಡಬೇಕಾದ ವಿಚಾರಗಳನ್ನು ಬಿಟ್ಟು ವಿಷಯಾಂತರ ಮಾಡಿ ಮಾತನಾಡುತ್ತಿದ್ದಾರೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್ ಸ್ಟೈಲ್ ಬಗ್ಗೆ ಮಾತನಾಡುವ ಬದಲು ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿ ಎಂದು ಆಗ್ರಹಿಸಿದರು.

ಯಾರೋ ಒಬ್ಬರು ಚೋಟಾ ಸಹಿ ಹಾಕಿದ ಕಾರಣಕ್ಕೆ ಯಡಿಯೂರಪ್ಪ ಅವರ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಯಿತು. ಈ ಚೋಟಾ ಸಹಿ ಹಾಕಿದವರು ಯಾರು? ಮಧು ಬಂಗಾರಪ್ಪ ಅವರ ಬಗ್ಗೆ ಮಾತನಾಡಿದ್ದೀರಿ ಎಂದು ನಿಮ್ಮ ಕ್ಷಮೆಯನ್ನೂ ನಾವು ಬಯಸುವುದಿಲ್ಲ. ನಿಮ್ಮ ಕ್ಷಮೆ ನಮಗೆ ಬೇಡ. ಬದಲಾಗಿ ಪಕ್ಷ ಕಟ್ಟಿದ ಈಶ್ವರಪ್ಪ, ಯತ್ನಾಳ್ ಅವರ ಬಳಿ ಕೇಳಿ ಎಂದು ಅವರು ಸವಾಲು ಹಾಕಿದರು.

ಇದನ್ನೂ ಓದಿ- ಪ್ರೀತಿ ಹೆಸರಲ್ಲಿ ಓರ್ವ, ಬ್ಲಾಕ್ ಮೇಲ್ ಮಾಡಿ ಮತ್ತೋರ್ವನಿಂದ ಬಾಲಕಿಯ ಅತ್ಯಾಚಾರ: ಕೀಚಕರಿಗೆ 20 ವರ್ಷ ಜೈಲು

ಬರ ಪರಿಹಾರದ ಬಗ್ಗೆ ಮಾತನಾಡಿಲ್ಲ. ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಕೇಂದ್ರದ ಬಳಿ ಮಾತನಾಡಿಲ್ಲ. 26 ಜನ ಸಂಸದರಿದ್ದರೂ ಒಮ್ಮೆಯೂ ದನಿ ಎತ್ತಿಲ್ಲ. ಈ ಬಾರಿ ಕಾಂಗ್ರೆಸ್ ಪಕ್ಷದ 20 ಕ್ಕೂ ಹೆಚ್ಚು ಸಂಸದರು ರಾಜ್ಯಕ್ಕೆ ಬೇಕಾದ ಸವಲತ್ತುಗಳನ್ನು ತರುತ್ತಾರೆ. ನೀವು ಅನವಶ್ಯಕ ಮಾತುಗಳನ್ನು ಬಿಟ್ಟು ಹಿಂದುಳಿದ ವರ್ಗಗಳ ನಾಯಕರು ಬೆಳೆಯಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಶಿವಮೊಗ್ಗದ ಇತಿಹಾಸದಲ್ಲಿ ಬಂಗಾರಪ್ಪ ಅವರು ಹಾಗೂ ಯಡಿಯೂರಪ್ಪ ಅವರನ್ನು ಮರೆಯಲು ಸಾಧ್ಯವಿಲ್ಲ. ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕದ ಮೂಲಕ ಹಳ್ಳಿ ಯುವಕರ, ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು. ಅಪ್ಪನ ಹಾದಿಯಂತೆ ಮಧು ಬಂಗಾರಪ್ಪ ಅವರು 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಅತ್ಯಂತ ಕಟ್ಟುನಿಟ್ಟಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿವೆ. ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ- ಹಿಂದಿ ಟೀಚರ್ ನಿಂದ ಹೀನಾಯ ಕೃತ್ಯ: ನೊಂದ ಬಾಲಕನಿಗೆ 1 ಲಕ್ಷ ರೂ. ಪರಿಹಾರ

ಯಡಿಯೂರಪ್ಪ, ಈಶ್ವರಪ್ಪ ಅವರು ಬಿಜೆಪಿಯನ್ನು ಕರ್ನಾಟಕದಲ್ಲಿ ತಳಮಟ್ಟದಿಂದ ಕಟ್ಟಿದ್ದಾರೆ. ಈಶ್ವರಪ್ಪ ಅವರನ್ನು ಕರ್ನಾಟಕದ ಅಡ್ವಾನಿ ಎಂದು ಕರೆಯಲಾಗುತ್ತಿತ್ತು. ಅಂತಹವರನ್ನು ವಿಜಯೇಂದ್ರ ಅವರು ಅದ್ವಾನ ಮಾಡಿದ್ದಾರೆ. ಈಶ್ವರಪ್ಪ ಅವರು ಹಾಗೂ ಅವರ ಮಗನಿಗೆ ಟಿಕೆಟ್ ಏಕೆ ತಪ್ಪಿಸಿದ್ದೀರಿ ಉತ್ತರಿಸಿ. ನೀವು ಓದುವುದು ಕಡಿಮೆ ಮಾಡಿರಬೇಕು ಅಥವಾ ನಿಮಗೆ ಸಲಹೆ ನೀಡುತ್ತಿರುವವರು, ಸುತ್ತಮುತ್ತ ಇರುವವರು ಓದುವುದು ಕಡಿಮೆ ಮಾಡಿರಬೇಕು ಆದ ಕಾರಣಕ್ಕೆ ನೀವು ತಾಳ ತಪ್ಪಿದವರಂತೆ ಮಾತನಾಡುತ್ತಾ ಇದ್ದೀರಿ ಎಂದು ಅವರು ಕುಟುಕಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ ಅವರು ವಿರೋಧ ಪಕ್ಷಗಳ ಮೇಲೆ ಕಿಡಿ ಕಾರಿದ್ದಕ್ಕಿಂತ ಹೆಚ್ಚು ವಿಜಯೇಂದ್ರ ಅವರ ಮೇಲೆ ಕಿಡಿ ಕಾರಿದ್ದಾರೆ. ಇದು ಯಾವ ಕಾರಣಕ್ಕೆ ಎಂದು ಉತ್ತರಿಸಬಹುದೇ? ರಾಜ್ಯಕ್ಕೆ ಬರಬೇಕಾದ ಬರ ಪರಿಹಾರದ ಬಗ್ಗೆ ಒಮ್ಮೆಯೂ ದನಿ ಎತ್ತಿಲ್ಲ. ವಿರೋಧ ಪಕ್ಷದ ರಾಜ್ಯ ಅಧ್ಯಕ್ಷರಾಗಿ ತಲೆಯಲ್ಲಿ ವಿಷಯಗಳು ಇಲ್ಲದೇ ಇದ್ದಾಗ ಈ ರೀತಿಯ ಕ್ಷುಲ್ಲಕ ವಿಚಾರಗಳು ಮುನ್ನೆಲೆಗೆ ಬರುತ್ತವೆ ಎಂದು ಹೇಳಿದರು.

ಇದನ್ನೂ ಓದಿ- ಪ್ರೀತಿ ಹೆಸರಲ್ಲಿ ಓರ್ವ, ಬ್ಲಾಕ್ ಮೇಲ್ ಮಾಡಿ ಮತ್ತೋರ್ವನಿಂದ ಬಾಲಕಿಯ ಅತ್ಯಾಚಾರ: ಕೀಚಕರಿಗೆ 20 ವರ್ಷ ಜೈಲು

ಯುವಕರಾಗಿರುವ ವಿಜಯೇಂದ್ರ ಅವರೇ ನಿಮ್ಮ ತಂದೆಯ ಕಾರಣಕ್ಕೆ ಅಧಿಕಾರ ಸಿಕ್ಕಿದೆಯೇ ಹೊರತು ಅದನ್ನು ಬಿಟ್ಟರೇ ನೀವು ದೊಡ್ಡ ಸೊನ್ನೆ. ಬಿಜೆಪಿ ಶಿಸ್ತಿನ ಪಕ್ಷ ಎಂದು ಕರೆಯಲಾಗುತ್ತದೆ. ನಿಜವಾದ ಶಿಸ್ತಿನ ಪಕ್ಷ ಕಾಂಗ್ರೆಸ್. ಏಕೆಂದರೆ ನಮ್ಮ ಪಕ್ಷದಲ್ಲಿ ಸಿಎಂ, ಡಿಸಿಎಂ, ಹಿರಿಯ ನಾಯಕರ ವಿರುದ್ಧ ಮಾತನಾಡಿದರೆ ಪಕ್ಷದಿಂದ ಕಿತ್ತು ಹಾಕಲಾಗುವುದು. ಆದರೆ ಬಿಜೆಪಿಯಲ್ಲಿ ಬಾಯಿಗೆ ಬಂದಂತೆ ಬೈದುಕೊಂಡು ಓಡಾಡಬಹುದು. ಈಶ್ವರಪ್ಪ, ಯತ್ನಾಳ್ ಅವರು ಮಾತನಾಡುತ್ತಲೇ ಇದ್ದಾರೆ ಅವರ ವಿರುದ್ದ ಮೊದಲು ಕ್ರಮ ತೆಗೆದುಕೊಳ್ಳಿ. ಕುರ್ಚಿಗಲ್ಲ ಧೈರ್ಯ ಇರುವುದು, ಅದರ ಮೇಲೆ ಕುಳಿತುಕೊಳ್ಳುವವರಿಗೆ ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷದ ವಿಮರ್ಶೆಗಳಿಗೆ ನಾವು ಉತ್ತರಿಸುತ್ತೇವೆ ಆದರೆ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಮುಖ್ಯ ವಿಚಾರವನ್ನು ಮರೆಸುತ್ತಾರೆ. ವಿಜಯೇಂದ್ರ ಅವರೇ ಯಾವುದಾದರೂ ವಿಚಾರಗಳ ಮೇಲೆ ಮಾತನಾಡೋಣ ಅದನ್ನು ಬಿಟ್ಟು ಬೇರೆ ವಿಚಾರಗಳು ಬೇಡ. ರಾಜ್ಯದ ಭವಿಷ್ಯವನ್ನು ಕಟ್ಟುವಂತ ಚರ್ಚೆ ನಡೆಸೋಣ ಅದನ್ನು ಬಿಟ್ಟು ಕೇವಲ ತೇಜೋವಧೆ ಮಾಡುವ ಅಂಶಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವುದು ಬೇಡ ಎಂದು ವಿಜಯೇಂದ್ರ ಅವರಿಗೆ ಸಲಹೆ ನೀಡುತ್ತೇನೆ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News