ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಮುಕ್ತ ಅಭಿಯಾನಕ್ಕೆ ಕೈ ಜೋಡಿಸಲು ಮನವಿ

ಘನ ಸರ್ಕಾರವು ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ ಅಪಜೀ 17 ಇಪಿಸಿ 2012 ಬೆಂಗಳೂರು ದಿನಾಂಕ: 11-03-2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ.

Written by - Bhavya Sunil Bangera | Last Updated : May 29, 2024, 08:13 PM IST
    • ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು
    • ಜಾಹೀರಾತುಗಳನ್ನು ನಿಯಂತ್ರಿಸಲು ಜಾಹೀರಾತು ಮುಕ್ತ ಅಭಿಯಾನ
    • ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮನವಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಮುಕ್ತ ಅಭಿಯಾನಕ್ಕೆ ಕೈ ಜೋಡಿಸಲು ಮನವಿ title=
File Photo

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು ಜಾಹೀರಾತು ಮುಕ್ತ ಅಭಿಯಾನವನ್ನು ಆರಂಭಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018" ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ.

ಇದನ್ನೂ ಓದಿ: ಬ್ಲೂ ಜೆರ್ಸಿ ಜೊತೆಗಿನ ಸಂಬಂಧ ಅಂತ್ಯ! ರೋಹಿತ್ ಶರ್ಮಾ ಗುಡ್ ಬೈ ಸುಳಿವು ನೀಡಿದ ಅನುಭವಿ ಕ್ರಿಕೆಟಿಗ

ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು  ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇದಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ಘನ ಸರ್ಕಾರವು ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ ಅಪಜೀ 17 ಇಪಿಸಿ 2012 ಬೆಂಗಳೂರು ದಿನಾಂಕ: 11-03-2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ. ಆದ್ದರಿಂದ ನಗರದ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ, ಅನಧಿಕೃತ ವಾಣಿಜ್ಯ ಜಾಹೀರಾತುಗಳು, ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು, ಇನ್ನಿತರೆ ಮುದ್ರಣ ಪ್ರಕಟಣೆ/ಜಾಹೀರಾತು ಹಾಗೂ ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತುಗಳು, ಬೃಹತ್ ಎಲ್.ಇ.ಡಿ ಜಾಹೀರಾತುಗಳು, ಸೈಕಲ್ ಜಾಹೀರಾತುಗಳು, ವಾಣಿಜ್ಯ ಜಾಹೀರಾತುಗಳು, ವಾಹನ ಜಾಹೀರಾತುಗಳು ಇತರೇ ಜಾಹೀರಾತುಗಳು ಕಂಡು ಬಂದಲ್ಲಿ ಕೇಂದ್ರ ಕಛೇರಿ ಹಾಗೂ ಆಯಾ ವಲಯಗಳ ಕಛೇರಿಗಳಿಗೆ ಮಾಹಿತಿ ನೀಡಲು ನಾಗರೀಕರಲ್ಲಿ ಮನವಿ ಮಾಡಿದೆ.

ಮಾಹಿತಿ ನೀಡಿದಂತಹ ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುವುದು. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ(ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಸದರಿಯವರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಬಿಬಿಎಂಪಿಯ ಅನಧಿಕೃತ ವಿವಿಧ ಜಾಹೀರಾತುಗಳನ್ನು ನಿಯಂತ್ರಿಸುವ ಮುಕ್ತ ಅಭಿಯಾನಕ್ಕೆ ನಾಗರೀಕರಲು ಕೈ ಜೋಡಿಸಿ ಬೆಂಬಲಿಸಲು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮನವಿ ಮಾಡಿದ್ದಾರೆ.

ಅನಧಿಕೃತ ಜಾಹೀರಾತುಗಳ ಕುರಿತು ದೂರುಗಳನ್ನು ನೊಂದಾಯಿಸುವ ದೂರವಾಣಿ ಸಂಖ್ಯೆಯ ವಿವರ:

ಉಪ ಆಯುಕ್ತರು(ಜಾಹೀರಾತು): 9480683939

ಕೇಂದ್ರ ಕಛೇರಿ: 080-22221188

ನಿಯಂತ್ರಣ ಕೊಠಡಿ ಐಪಿಪಿ: 080-22660000

ಪೂರ್ವ ವಲಯ ನಿಯಂತ್ರಣ ಕೊಠಡಿ:

080-22975803 / 22975502

ಪಶ್ಚಿಮ ವಲಯ ನಿಯಂತ್ರಣ ಕೊಠಡಿ:

080-23561692 / 23463366

ದಕ್ಷಿಣ ವಲಯ ನಿಯಂತ್ರಣ ಕೊಠಡಿ:

080-26566362 / 22975703

ರಾಜರಾಜೇಶ್ವರಿ ನಗರ ವಲಯ ನಿಯಂತ್ರಣ ಕೊಠಡಿ:

080-28601851 / 28600957

ಬೊಮ್ಮನಹಳ್ಳಿ ವಲಯ ನಿಯಂತ್ರಣ ಕೊಠಡಿ:

080-25732447 / 25735642

ಮಹದೇವಪುರ ವಲಯ ನಿಯಂತ್ರಣ ಕೊಠಡಿ:

080-28512300 / 28512301

ಯಲಹಂಕ ವಲಯ ನಿಯಂತ್ರಣ ಕೊಠಡಿ:

080-23636671 / 22975936 

ದಾಸರಹಳ್ಳಿ ವಲಯ ನಿಯಂತ್ರಣ ಕೊಠಡಿ:

080-28394909 / 28393688

ಇದನ್ನೂ ಓದಿ: ಟೀಂ ಇಂಡಿಯಾ ಆಡುವ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ: ಆರಂಭಿಕರಾಗಿ ರೋಹಿತ್ ಅಲ್ಲ, ಈ ಆಟಗಾರ ಕಣಕ್ಕೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News