Fruits and vegetables For Heart: ಅಧಿಕ ರಕ್ತದೊತ್ತಡ, ಬೊಜ್ಜು, ಕೆಟ್ಟ ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳು ಹೃದಯ ಸಂಬಂಧಿತ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಇವುಗಳನ್ನು ನಿಯಂತ್ರಿಸಿದರೆ ಹೃದಯ ಕಾಯಿಲೆಗಳಿಂದಲೂ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ನಮ್ಮ ದೈನಂದಿನ ಆಹಾರದಲ್ಲಿ ಕೆಲವು ಹಣ್ಣು-ತರಕಾರಿಗಳನ್ನು ಸೇರಿಸುವುದರಿಂದ ಹೃದಯವನ್ನು (Fruits Vegetables For Heart) ಆರೋಗ್ಯವಾಗಿರಿಕೊಳ್ಳಬಹುದು ಎನ್ನಲಾಗುತ್ತದೆ.
ಹೃದಯ ಕಾಯಿಲೆಗಳಿಂದ ದೂರ ಉಳಿಯಲು ತಿನ್ನಲೇಬೇಕಾದ ಹಣ್ಣು-ತರಕಾರಿಗಳಿವು:
ಬೆರ್ರಿಗಳು ಮತ್ತು ದ್ರಾಕ್ಷಿ ಹಣ್ಣುಗಳು:
ಸ್ಟ್ರಾಬೆರಿ, ಬ್ಲೂಬೆರ್ರಿ, ರಾಸ್ಬೆರ್ರೀಸ್ ಮತ್ತು ದ್ರಾಕ್ಷಿಯಂತಹ ಬೆರ್ರಿ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು. ವಾಸ್ತವವಾಗಿ, ಬೆರ್ರಿ ಹಣ್ಣುಗಳಲ್ಲಿರುವ ಪೆಕ್ಟಿನ್ ಅಂಶವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು (Reduce Cholesterol) ಸಹಾಯ ಮಾಡುತ್ತದೆ.
ಇದನ್ನೂ ಓದಿ- ಬಿಪಿ, ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಪ್ರಯೋಜನಕಾರಿ ಡಾರ್ಕ್ ಚಾಕೊಲೇಟ್
ಸಿಟ್ರಸ್ ಹಣ್ಣುಗಳು:
ಸಿಟ್ರಸ್ ಹಣ್ಣುಗಳಲ್ಲಿ ಫೈಬರ್ ಹೆಚ್ಚಿನ ಪ್ರಮಾಣಗಳಲ್ಲಿ ಕಂಡು ಬರುತ್ತದೆ. ಇದು ರಕ್ತನಾಳಗಳಲ್ಲಿ ಕೊಬ್ಬನ್ನು ನಿಯಂತ್ರಿಸಲು ಪರಿಣಾಮಕಾರಿ ಆಗಿದೆ. ಅಷ್ಟೇ ಅಲ್ಲ, ಕಿತ್ತಳೆ, ನಿಂಬೆಯಂತಹ ಸಿಟ್ರಸ್ ಹಣ್ಣುಗಳ ಸೇವನೆಯಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆ (Heart related health problem)ಗಳಿಂದಲೂ ನಮ್ಮನ್ನು ದೂರ ಉಳಿಸುತ್ತದೆ.
ಹೃದ್ರೋಗಿಗಳಿಗೆ ತರಕಾರಿಗಳು:
ಸೊಪ್ಪು:
ತಾಜಾ ಹಸಿರು ಸೊಪ್ಪುಗಳಲ್ಲಿ ಕ್ಯಾರೊಟಿನಾಯ್ಡ್ಗಳು ಮತ್ತು ಲುಟೀನ್ಗಳು ಕಂಡು ಬರುತ್ತದೆ. ಅದರಲ್ಲೂ ನಮ್ಮ ದೈನಂದಿನ ಆಹಾರದಲ್ಲಿ ಪಾಲಕ್, ಎಲೆಕೋಸು ಸೇವನೆಯು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ- Diabetes Drinks: ರಕ್ತದಲ್ಲಿನ ಸಕ್ಕರೆ ನಿಯಂತ್ರಿಸಲು ಮಧುಮೇಹಿಗಳಿಗೆ ವರದಾನ ಈ ನೈಸರ್ಗಿಕ ಪಾನೀಯಗಳು
ಟೊಮೆಟೊ:
ಭಾರತೀಯ ಅಡುಗೆಮನೆಯಲ್ಲಿ ಬಹುತೇಕ ಖಾದ್ಯಗಳಲ್ಲಿ ಬಳಸಲ್ಪಡುವ ತರಕಾರಿ ಟೊಮೆಟೊ. ನಿತ್ಯ ಟೊಮೆಟೊ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಅಷ್ಟೇ ಅಲ್ಲ, ಇದು ನಿಮ್ಮನ್ನು ಹೃದಯ ಆರೋಗ್ಯ ಸಮಸ್ಯೆಗಳಿಂದಲೂ ದೂರ ಉಳಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.