ವಿಧಾನ ಪರಿಷತ್ತಿನ 11 ಸ್ಥಾನಕ್ಕೆ ದೈವಾರ್ಷಿಕ ಚುನಾವಣೆ: 12 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರ ಸಲ್ಲಿಕೆ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸಿಟಿ ರವಿ ಎರಡು ನಾಮಪತ್ರ, ಎನ್. ರವಿಕುಮಾರ್ ಎರಡು ನಾಮಪತ್ರ ಮತ್ತು ಮುಳೆ ಮಾರುತಿರಾವ್ ಎರಡು ನಾಮಪತ್ರ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡ ಮೂರು ನಾಮಪತ್ರ ಸಲ್ಲಿಸಿದ್ದಾರೆ.

Written by - Prashobh Devanahalli | Last Updated : Jun 3, 2024, 08:47 PM IST
    • ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆ
    • ದೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ
    • ಒಟ್ಟು 12 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರಗಳು ಸಲ್ಲಿಕೆ
ವಿಧಾನ ಪರಿಷತ್ತಿನ 11 ಸ್ಥಾನಕ್ಕೆ ದೈವಾರ್ಷಿಕ ಚುನಾವಣೆ: 12 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರ ಸಲ್ಲಿಕೆ title=
Vidhan Parishad Election

ಬೆಂಗಳೂರು: ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (03-06-2024) 11 ಅಭ್ಯರ್ಥಿಗಳಿಂದ 26 ನಾಮಪತ್ರಗಳು ಸಲ್ಲಿಕೆಯಾಗಿದ್ದು, ನಾಮಪತ್ರ ಸಲ್ಲಿಕೆಯ ಆರಂಭದ ದಿನದಿಂದ ಒಟ್ಟು 12 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಡಾ. ಯತೀಂದ್ರ.ಎಸ್ ಎರಡು ನಾಮಪತ್ರ, ಕೆ. ಗೋವಿಂದರಾಜು ಎರಡು ನಾಮಪತ್ರ, ಬಿಲ್ಕಿಸ್ ಬಾನೋ ಎರಡು ನಾಮಪತ್ರ, ಎನ್.ಎಸ್.ಭೋಸರಾಜು ಮೂರು ನಾಮಪತ್ರ, ಜಗದೇವ ಗುತ್ತೇದಾರ್ 1 ನಾಮಪತ್ರ, ಐವನ್ ಡಿಸೋಜಾ 3 ನಾಮಪತ್ರ ಹಾಗೂ ಎ.ವಸಂತ ಕುಮಾರ್ ಮೂರು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ತೂಕ ಇಳಿಕೆಗೆ ಈ ಬಣ್ಣದ ಕ್ಯಾರೆಟ್ ವರದಾನ: ತಿಂದರೆ 5 ದಿನದಲ್ಲಿ ಸೊಂಟದ ಬೊಜ್ಜು ಸುಲಭವಾಗಿ ಕರಗುತ್ತೆ! ಸೂಪರ್ ಫಿಗರ್ ಆಗ್ತೀರಿ

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸಿಟಿ ರವಿ ಎರಡು ನಾಮಪತ್ರ, ಎನ್. ರವಿಕುಮಾರ್ ಎರಡು ನಾಮಪತ್ರ ಮತ್ತು ಮುಳೆ ಮಾರುತಿರಾವ್ ಎರಡು ನಾಮಪತ್ರ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡ ಮೂರು ನಾಮಪತ್ರ ಸಲ್ಲಿಸಿದ್ದಾರೆ.

ಮೇ 31 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಸಿಫ್ ಪಾಷಾ ಆರ್.ಎಂ ಅವರು ಒಂದು ನಾಮಪತ್ರ ಸಲ್ಲಿಸಿದ್ದರು

ಇದನ್ನೂ ಓದಿ:ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೆ ಅರಳುತ್ತಾ ಕಮಲ? ಯಾರಿಗೆ ವಿಜಯಮಾಲೆ?

ಜೂನ್ 4, 2024 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂನ್ 6, 2024 ರಂದು ಕೊನೆಯ ದಿನವಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News