ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಸಿದ್ಧ: ಕೊಹ್ಲಿ ಓಪನರ್, 3ನೇ ಕ್ರಮಾಂಕದಲ್ಲಿ ಈತ ಕಣಕ್ಕೆ!

India Playing 11 Against Pakistan: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ಹಲವು ಮಾಜಿ ದಿಗ್ಗಜರು ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಆಯ್ಕೆ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಅನೇಕ ಅನುಭವಿಗಳು ಬಹಿರಂಗವಾಗಿ ಮಾತನಾಡಿದ್ದಾರೆ.

Written by - Bhavishya Shetty | Last Updated : Jun 7, 2024, 08:44 PM IST
    • ಜೂನ್ 9 ರಂದು ಟಿ20 ವಿಶ್ವಕಪ್‌’ನ ಹೈವೋಲ್ಟೇಜ್ ಪಂದ್ಯ
    • ಈ ದಿನ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ
    • ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ
ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಸಿದ್ಧ: ಕೊಹ್ಲಿ ಓಪನರ್, 3ನೇ ಕ್ರಮಾಂಕದಲ್ಲಿ ಈತ ಕಣಕ್ಕೆ! title=
Team India Playing 11

India Playing 11 Against Pakistan: 2024 T20 ವಿಶ್ವಕಪ್ ಆರಂಭವಾಗಿದ್ದು, ಈ ಪಂದ್ಯಾವಳಿಯನ್ನು ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆಡಲಾಗುತ್ತಿದೆ. ಜೂನ್ 9 ರಂದು ಟಿ20 ವಿಶ್ವಕಪ್‌’ನ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ದಿನ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದನ್ನು ನೋಡೋಣ.

ಇದನ್ನೂ ಓದಿ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಇವರು ಒಂದು ಸಿನಿಮಾಗೆ ಪಡೆಯುವ ಸಂಭಾವನೆ…

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ಹಲವು ಮಾಜಿ ದಿಗ್ಗಜರು ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಆಯ್ಕೆ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಅನೇಕ ಅನುಭವಿಗಳು ಬಹಿರಂಗವಾಗಿ ಮಾತನಾಡಿದ್ದಾರೆ. ರೋಹಿತ್ ಮತ್ತು ವಿರಾಟ್ ಇನ್ನಿಂಗ್ಸ್ ಆರಂಭಿಸಿದರೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಏನಾಗುತ್ತದೆ ಎಂಬುದನ್ನು ಮುಂದೆ ನೋಡೋಣ.

ನ್ಯೂಯಾರ್ಕ್‌’ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಈ ಪಿಚ್ ವೇಗದ ಬೌಲರ್‌’ಗಳಿಗೆ ಸಹಾಯಕವಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಅಂತಿಮ ಆಡುವ 11ರ ಬಳಗದಲ್ಲಿ ಮೂವರು ವೇಗದ ಬೌಲರ್‌ ಮತ್ತು ಇಬ್ಬರು ಸ್ಪಿನ್ನರ್‌’ಗಳನ್ನು ಸೇರಿಸಿಕೊಳ್ಳಬಹುದು.

ರೋಹಿತ್ ಮತ್ತು ವಿರಾಟ್ ಓಪನಿಂಗ್ ಮಾಡಿದರೆ, ಸ್ಫೋಟಕ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವುದಿಲ್ಲ. ರೋಹಿತ್ ಮತ್ತು ವಿರಾಟ್ ನಂತರ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇದಾದ ನಂತರ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಬಹುದು.

ಮಧ್ಯಮ ಕ್ರಮಾಂಕದ ಬಗ್ಗೆ ಮಾತನಾಡುವುದಾದರೆ, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಮ್ಯಾಚ್ ಫಿನಿಶರ್‌ಗಳ ಪಾತ್ರದಲ್ಲಿ ಕಾಣಬಹುದು. ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಆಡುವುದು ಖಚಿತ. ಕುಲದೀಪ್ ಯಾದವ್ ಜೊತೆಗೆ ಎರಡನೇ ಸ್ಪಿನ್ನರ್ ಪಾತ್ರವನ್ನು ಜಡೇಜಾ ನಿರ್ವಹಿಸಬಹುದು. ವೇಗದ ಬೌಲರ್‌’ಗಳಾಗಿ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಮತ್ತು ಜಸ್‌ಪ್ರೀತ್ ಬುಮ್ರಾ ಮೂವರು ಕಣಕ್ಕಿಳಿಯಬಹುದು..

ಇದನ್ನೂ ಓದಿ: ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?

India Playing 11 Against Pakistan: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್,

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News