ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆ

CM Siddaramaiah: ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.

Written by - Yashaswini V | Last Updated : Jun 11, 2024, 03:47 PM IST
  • ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು
  • ಟಾರ್ಗೆಟ್ ತಲುಪಲು ಅಧಿಕಾರಿಗಳು ಶ್ರಮಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆ  title=

CM Siddaramaiah: ಅಬಕಾರಿ ಪರವಾನಗಿಗಳ (Excise Licenses) ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ  ನುಸುಳುವ  ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಇಂದು ಅಬಕಾರಿ ಇಲಾಖೆಯ (Excise Department)  ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ (Election Code of Conduct) ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.

ಇದನ್ನೂ ಓದಿ- ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಈ ವೇಳೆ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು. 

ನೂತನ ತಂತ್ರಾಂಶವನ್ನು ಲೋಕಾರ್ಪಣೆ: 
ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ- "ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ.ಇದು ಮುಂದುವರಿಯಲಿ ಆಲ್ ದಿ ಬೆಸ್ಟ್"

ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ . ರವಿಶಂಕರ್ ಉಪಸ್ಥಿತರಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News