ಚಾಮರಾಜನಗರ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಸಲಾಗುತ್ತಿರುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡಪರ ಹೋರಾಟಗಾರರು (Pro Kannada Activists) ನಗರದ ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು (Central Govt) ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಬಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : NTA ಸ್ಪಷ್ಟನೆ
ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ (Corruption in NEET exam) ನಡೆದಿರುವ ಶಂಕೆ ಇದೆ. ಇದು ಇದೇ ರೀತಿ ಮುಂದುವರೆದರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಲಿದೆ. ಅವರು ಶಾಶ್ವತವಾಗಿ ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ಹೊರಗುಳಿಯಲಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಈ ನೀಟ್ ಪರೀಕ್ಷೆಯನ್ನು ಕರ್ನಾಟಕ, ತಮಿಳುನಾಡು ರಾಜ್ಯವು ಸೇರಿದಂತೆ ಹಲವಾರು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.ಆದ್ದರಿಂದ ರಾಷ್ಟ್ರಪತಿಗಳಾದ ತಾವು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಈ ಪರೀಕ್ಷೆಗಳನ್ನು ನಡೆಸಲು ಆಯಾ ರಾಜ್ಯಗಳಿಗೆ ಅಧಿಕಾರ ನೀಡಬೇಕು ಇದಕ್ಕೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಸಲ್ಲಿಸಿರುವ ಮನವಿಯಲ್ಲಿ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.
ಇದನ್ನೂ ಓದಿ- Free Medical Course College: ಈ ಮೆಡಿಕಲ್ ಕಾಲೇಜಿನಲ್ಲಿ ಫ್ರೀ ಆಗಿ ಸಿಗುತ್ತೆ ವೈದ್ಯಕೀಯ ಕೋರ್ಸ್, ಇಲ್ಲಿದೆ ಮಾಹಿತಿ
ಈ ಸಂದರ್ಭದಲ್ಲಿ ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಗು.ಪುರುಷೋತ್ತಮ, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ರಾಜಪ್ಪ, ಲಿಂಗರಾಜು ಇತರರು ಹಾಜರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.