ಪೇಜಾವರ ಶ್ರೀಗಳ ಸ್ಥಿತಿ ಮತ್ತಷ್ಟು ಗಂಭೀರ

ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೇಜಾವರ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Last Updated : Dec 28, 2019, 12:01 PM IST
ಪೇಜಾವರ ಶ್ರೀಗಳ ಸ್ಥಿತಿ ಮತ್ತಷ್ಟು ಗಂಭೀರ title=

ಬೆಂಗಳೂರು: ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಅವರ ಆರೋಗ್ಯ ಕಳೆದ ರಾತ್ರಿಯಿಂದ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀಗಳ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೂ ಸುಧಾರಣೆ ಕಂಡಿಲ್ಲ, ಶ್ರೀಗಳು ಈಗಲೂ ಕೂಡ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.

ಮಣಿಪಾಲ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ಲಭ್ಯವಾಗಿದ್ದು, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣವಾಗಿದೆ ಎಂದು ಹೇಳಲಾಗಿದೆ.

ಪೇಜಾವರ ಶ್ರೀಗಳಿಗೆ ಶುಕ್ರವಾರ ರಾತ್ರಿ ಒಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ಇಂದುಮತ್ತೊಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗುತ್ತದೆ ಎನ್ನಲಾಗಿದೆ.

Trending News