ಬೆಂಗಳೂರು: ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ ಎಂದು ಸಿಎಂ ಕಚೇರಿ ತಿಳಿಸಿದೆ.
ಇದನ್ನೂ ಓದಿ: ಎಟಿಎಂ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಇನ್ಮುಂದೆ ಹೆಚ್ಚಿನ ಶುಲ್ಕ ಪಾವತಿಸಬೇಕು!
ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ.ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ.
ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿರುತ್ತದೆ ಎಂದು ಸಿಎಂ ಕಚೇರಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.