ನವದೆಹಲಿ: ಪೇಪರ್ ಸೋರಿಕೆಯಿಂದಾಗಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾದ ಕಾರಣ ಈಗ ಶಿಕ್ಷಣ ಸಚಿವಾಲಯವು ಯುಜಿಸಿ ನೆಟ್ ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸಿದೆ.ಈ ನಿರ್ಧಾರವು ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ಉಂಟುಮಾಡಿತು, ಆದ್ದರಿಂದ ಯುಜಿಸಿ ನೆಟ್ ಪರೀಕ್ಷೆಯನ್ನು ಮಾತ್ರ ರದ್ದುಗೊಳಿಸಲಾಗಿದೆ ಎಂದು ಸಚಿವಾಲಯವು ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದೆ.
ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದ ಅಭ್ಯರ್ಥಿಗಳು ಯುಜಿಸಿ-ಎನ್ಇಟಿ ರದ್ದಾದ ವಿಷಯ ತಿಳಿದಾಗ ಆತಂಕ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!
ಈಗ ಪರೀಕ್ಷೆಯ ರದ್ದತಿ ಕುರಿತಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವಾಲಯ, ಪರೀಕ್ಷೆಯ ಸಮಗ್ರತೆಯಲ್ಲಿ ಸಂಭವನೀಯ ರಾಜಿಗಳನ್ನು ಸೂಚಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಅನ್ವಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ. ಇದೇ ವೇಳೆ ರಾಷ್ಟ್ರವ್ಯಾಪಿ ಪ್ರಮುಖ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ವಿರುದ್ಧ ಸರಣಿ ಟೀಕೆಗಳು ಬಂದಿವೆ.
ಈ ಕುರಿತಾಗಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಜಿ, ನೀವು ಯಾವಾಗ 'ನೀಟ್ ಪರೀಕ್ಷಾ ಪೇ ಚರ್ಚಾ' ನಡೆಸುತ್ತೀರಿ?" ಎಂದು ಅವರು ಪ್ರಶ್ನಿಸಿದ್ದಾರೆ.
.@narendramodi जी,
आप "परीक्षा पर चर्चा" तो बहुत करते हैं, "NEET परीक्षा पर चर्चा" कब करेंगे?
UGC-NET परीक्षा को रद्द करना लाखों छात्र-छात्राओं के जज़्बे की जीत है।
ये मोदी सरकार के अहंकार की हार है जिसके चलते उन्होंने हमारे युवाओं के भविष्य को रौंदने का कुत्सित प्रयास…
— Mallikarjun Kharge (@kharge) June 19, 2024
ಇನ್ನೊಂದೆಡೆಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರ ಯುವಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ನೀಟ್ ಪರೀಕ್ಷೆಯಲ್ಲಿನ ಅಕ್ರಮದ ಜೊತೆಗೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿರುವುದನ್ನು ಅವರು ಉಲ್ಲೇಖಿಸಿ ಕಿಡಿ ಕಾರಿದ್ದಾರೆ.
ಯುಜಿಸಿ ನೆಟ್ ಪರೀಕ್ಷೆ ರದ್ದತಿ ಕುರಿತು ಎಎನ್ಐ ಜತೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ, “ನೀಟ್-ಯುಜಿ ಪರೀಕ್ಷೆಯ ಪೇಪರ್ ಸೋರಿಕೆಯಿಂದಾಗಿ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ತೂಗ್ಯೋಯಾಲೆಯಲ್ಲಿದೆ.ಯುಜಿಸಿ-ನೆಟ್ ಪತ್ರಿಕೆ ಸೋರಿಕೆಗೆ ಎನ್ಟಿಎ ಅಷ್ಟೊಂದು ಅಸಡ್ಡೆಯಾಗಿದೆಯೇ? ಪ್ರಧಾನಿ, ಕೇಂದ್ರ ಗೃಹ ಸಚಿವರು ಮತ್ತು ಶಿಕ್ಷಣ ಸಚಿವರು ಎಲ್ಲಿ ? ಎಂದು ಅವರು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.