What If Indian Cricket Players Form Cabinet: ಕ್ರಿಕೆಟ್ ಮತ್ತು ರಾಜಕೀಯದ ಬಗ್ಗೆ ಭಾರತದಲ್ಲಿ ಹೆಚ್ಚಿನ ಕ್ರೇಜ್ ಇದೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆ ಬಳಿಕ ನೂತನ ಸಚಿವ ಸಂಪುಟ ರಚನೆಯಾಗಿದೆ.
ಮತ್ತೊಂದೆಡೆ ಭಾರತ ತಂಡ ಟಿ20 ವಿಶ್ವಕಪ್ ಆಡುತ್ತಿದೆ. ಆದರೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಕೆಲ ಫೋಟೋಸ್ ವೈರಲ್ ಆಗಿದ್ದು, ಇದರಲ್ಲಿ ಭಾರತ ತಂಡದ ಆಟಗಾರರನ್ನು ಒಳಗೊಂಡ ಸಚಿವ ಸಂಪುಟ ರಚನೆಯಾದರೆ ಹೇಗಿರುತ್ತೆ? ಎಂಬ ಚಿತ್ರಣವನ್ನು ನೀಡಲಾಗಿದೆ.
ಇದನ್ನೂ ಓದಿ: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಶುಭ್ಮನ್ ಗಿಲ್ ನಾಯಕ- ಹೊಸ ಮುಖಗಳಿಗೆ ಮಣೆ
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಹೊಸದಾಗಿ ಆಯ್ಕೆಯಾದ ಸಂಸದರು ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ. ಈ ಸಂಸದರು ಪ್ರಮಾಣ ವಚನ ಬೋಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟವನ್ನು ಪರಿಚಯಿಸಿದ್ದಾರೆ.
ಮತ್ತೊಂದೆಡೆ, ವೆಸ್ಟ್ ಇಂಡೀಸ್’ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್’ನ ಸೂಪರ್ 8 ಸುತ್ತಿನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವನ್ನು ಆಡಲಿದ್ದು, ಸಿದ್ಧತೆಗಳು ನಡೆಯುತ್ತಿವೆ.
ಇದೀಗ ಸೋಶಿಯಲ್ ಮೀಡಿಯಾದಲ್ಲಿ ಎಐ ಜನರೇಟೆಡ್ ಫೋಟೋಸ್ ವೈರಲ್ ಆಗಿದ್ದು, ಆಟಗಾರರ ಸಂಪುಟ ರಚನೆಯಾದರೆ ಪ್ರಸ್ತುತ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸರ್ಕಾರವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದೆ. ಅಂದರೆ ಕ್ರಿಕೆಟಿಗರ ಸಂಪುಟದಲ್ಲಿ ರೋಹಿತ್ ಶರ್ಮಾ ಪ್ರಧಾನಿಯಾಗಲಿದ್ದಾರೆ. ವಿರಾಟ್ ಕೊಹ್ಲಿಗೆ ಗೃಹ ಸಚಿವ ಸ್ಥಾನ, . ರವೀಂದ್ರ ಜಡೇಜಾ ಕೃಷಿ ಸಚಿವ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ರಕ್ಷಣಾ ಮತ್ತು ರೈಲ್ವೆ ಸಚಿವಾಲಯ, ಹಾರ್ದಿಕ್ ಪಾಂಡ್ಯಗೆ ಕ್ರೀಡಾ ಮತ್ತು ಯುವ ಸಚಿವಾಲಯ, ಕೆ. ಎಲ್ ರಾಹುಲ್’ಗೆ ಹಣಕಾಸು ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಭಮನ್ ಗಿಲ್’ಗೆ, ಕುಲದೀಪ್ ಯಾದವ್’ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ,ರಿಷಭ್ ಪಂತ್’ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಮೊಹಮ್ಮದ್ ಸಿರಾಜ್’ಗೆ ಅಲ್ಪಸಂಖ್ಯಾತರ ಖಾತೆ ನೀಡುವಂತಿರುವ ಎಐ ಫೋಟೋಸ್ ವೈರಲ್ ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.