ಬೆಂಗಳೂರು :ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಎಂಟೂವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ,ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ.ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ. ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ : ಡಿಸೆಂಬರ್ನಲ್ಲಿ 3 ದಿನಗಳ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ತುರ್ತುಪರಿಸ್ಥಿತಿ 49 ವರ್ಷ ಆದ ಹಿನ್ನೆಲೆಯಲ್ಲಿ ಬಿಜೆಪಿಯವರ ಹೇಳಿಕೆಗಳ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಜ್ವಲಂತ ಸಮಸ್ಯೆಗಳಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು.ದೇಶದಲ್ಲಿ ಬಡತನ ಇನ್ನೂ ಇದೆ. ಮತ್ತಷ್ಟು ಅಭಿವೃದ್ಧಿಯಾಗಬೇಕು,ಉದ್ಯೋಗ ಸಿಗಬೇಕಿದೆ.ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು,ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ,ಭವಿಷ್ಯ, ಜನರ ಬಗ್ಗೆ ಕಾಳಾಜಿ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರದ ಕುರಿತು ಮಾತನಾಡಿದ ಅವರು, ಎಲ್ಲರೂ ಒಂದೇ ಜೈಲಿನಲ್ಲಿ ಇರುವುದು ಸೂಕ್ತವಲ್ಲ ಎಂಬ ಕಾರಣದಿಂದ ಬಂಧಿಖಾನೆ ಅಧಿಕಾರಿಗಳು ಮತ್ತು ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ತುಮಕೂರು ಜೈಲಿಗೆ ಸ್ಥಳಾಂತರಿಸಿದ್ದಾರೆ ಎಂದರು.
ಇದನ್ನೂ ಓದಿ : ಸೆಪ್ಟೆಂಬರ್ ಅಂತ್ಯದ ವೇಳೆಗೆ ನಾಗಸಂದ್ರದಿಂದ ಮಾದಾವರ ಮೆಟ್ರೋ ಆರಂಭ !
ಯುವತಿ ಪ್ರಬುದ್ಧ ಕೊಲೆ ಪ್ರಕರಣ ಸಿಐಡಿಗೆ ವಹಿಸಿರುವ ಕುರಿತು ಪ್ರತಿಕ್ರಿಯಿಸಿ, ಈವರೆಗಿನ ತನಿಖೆ ಕೊಲೆಯಾದ ಯುವತಿಯ ಪಾಲಕರಿಗೆ ಸಮಾಧಾನ ತಂದಿಲ್ಲ. ಸಿಐಡಿಗೆ ವಹಿಸುವಂತೆ ಕೋರಿ ನನಗೂ ಮನವಿ ಮಾಡಿದ್ದರು. ಸಿಎಂ ಜೊತೆ ಚರ್ಚಿಸಿ, ನಿರ್ಧಾರ ಮಾಡುವುದಾಗಿ ಭರವಸೆ ನೀಡಿದ್ದೆ. ನಿನ್ನೆ ಮುಖ್ಯಮಂತ್ರಿಯವರು ಸಿಐಡಿಗೆ ವಹಿಸಿದ್ದಾರೆ ಎಂದರು.
ನೀಟ್ ಅಕ್ರಮದ ಬಗ್ಗೆ ನರೇಂದ್ರ ಮೋದಿಯವರು ಮೌನ ವಹಿಸಿರುವ ಕುರಿತು ಮಾತನಾಡಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ದೇಶದಲ್ಲಿ ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಆದರೆ, ಪ್ರದಾನಿ ಮೋದಿಯವರಿಗೆ ಈ ಬಗ್ಗೆ ಏನು ಅನ್ನಿಸಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಏನಾದರೂ ಅಂತಿಮ ನಿರ್ಧಾರ ಕೈಗೊಳ್ಳಬೇಕಲ್ಲವೇ? ಮರುಪರೀಕ್ಷೆ ನಡೆಸುವುದು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಲ್ಲವೇ? ಇದೆಲ್ಲವನ್ನು ಪ್ರಧಾನಿ ಮಂತ್ರಿಯವರಾಗಲಿ ಅಥವಾ ಸಂಬಂಧಪಟ್ಟ ಮಂತ್ರಿಗಳಾಗಲಿ ಜವಾಬ್ದಾರಿಯುತವಾಗಿ ತೀರ್ಮಾನ ಪ್ರಕಟಿಸಬೇಕು.ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಿಗೆ ಪ್ರವೇಶ ಆರಂಭವಾಗಬೇಕಿತ್ತು. ಮಕ್ಕಳು ಗೊಂದಲದಲ್ಲಿದ್ದು, ಇದರಿಂದ ಅವರ ಭವಿಷ್ಯ ಏನಾಗಬೇಕು? ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ:ಬಸವರಾಜ ಬೊಮ್ಮಾಯಿ
ಶಿಕ್ಷಣ ಕ್ಷೇತ್ರದಲ್ಲಿ ನಾನು ಕೆಲಸ ಮಾಡಿರುವುದರಿಂದ ನೀಟ್ನ ಸಾದಕ-ಬಾದಕಗಳ ಬಗ್ಗೆ ಗೊತ್ತಿದೆ. ಜಡ್ಜ್ಮೆಂಟ್ ಏನಾಯಿತು? 11 ನ್ಯಾಯಾಧೀಶರ ಜಡ್ಜ್ಮೆಂಟ್ ಬದಿಗೊತ್ತಿ ನೀಟ್ ಮಾಡಿದ್ದಾರೆ. ಅವರು ಮಾಡುವುದಕ್ಕೆ ನಮ್ಮದೇನು ತಕರಾರು ಇಲ್ಲ. ಮಕ್ಕಳಿಗೆ ಸರಿಯಾಗಿ, ಸುಲಭವಾಗಿ ಸೀಟು ಸಿಗುವ ರೀತಿಯಲ್ಲಿ ಮಾಡಬೇಕಲ್ಲವೇ? ರಾಜ್ಯ ಸರ್ಕಾರ ಮಾಡಿದ್ದ ಸಿಇಟಿ ಪರೀಕ್ಷೆ ಮಾದರಿಯಾಗಿತ್ತು.ರಾಜ್ಯ ಸರ್ಕಾರಗಳಿಗೆ ವಹಿಸಿದರೆ ಯಶಸ್ವಿಯಾಗಿ ನಡೆಸುತ್ತಾರೆ.ಇದನ್ನು ವ್ಯವಸ್ಥಿತವಾಗಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ