T20 World Cup: ಭಾರತ ಕ್ರಿಕೆಟ್ ತಂಡವು T20 ವಿಶ್ವಕಪ್ 2024 ಟ್ರೋಫಿಯನ್ನು ಸ್ವೀಕರಿಸಲು ಇನ್ನೆರಡು ಹೆಜ್ಜೆ ದೂರದಲ್ಲಿದೆ. ಭಾರತ ತಂಡ ಇಲ್ಲಿಯವರೆಗೆ ಒಂದೇ ಒಂದು ಸೋಲನ್ನು ಕಾಣದೆ ಸೆಮಿಫೈನಲ್ ತಲುಪಿದೆ. ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ಟಿ20 ವಿಶ್ವಕಪ್ 2024 ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಪಂದ್ಯದ ಮೇಲೆ ಮಳೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪಂದ್ಯವು ಸ್ಥಳೀಯ ಕಾಲಮಾನ ಬೆಳಗ್ಗೆ 10:30ಕ್ಕೆ (ಭಾರತದಲ್ಲಿ ರಾತ್ರಿ 8 ಗಂಟೆಗೆ) ಪ್ರಾರಂಭವಾಗಲಿದೆ. ಆದ್ರೆ, ಮಳೆ ಬಂದರೆ ಏನಾಗುತ್ತೆ ಅನ್ನೋದು ಅಭಿಮಾನಿಗಳ ಮನದಲ್ಲಿ ಮೂಡಿರುವ ಪ್ರಶ್ನೆ.. !
ಹವಾಮಾನ ವರದಿಗಳ ಪ್ರಕಾರ, ಗುರುವಾರ ಬೆಳಿಗ್ಗೆ ಗಯಾನಾದಲ್ಲಿ 88% ಮಳೆಯ ಸಾಧ್ಯತೆ ಮತ್ತು 18% ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮೀಸಲು ದಿನವನ್ನು ಇರಿಸಲಾಗಿತ್ತು ಆದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ಗೆ ಯಾವುದೇ ಮೀಸಲು ದಿನ ಇರಲಿಲ್ಲ. ಮಳೆಯು ಆಟಕ್ಕೆ ಅಡ್ಡಿಪಡಿಸಿದರೆ 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಅನುಮತಿಸಲಾಗುತ್ತದೆ.
ಪಂದ್ಯ ರದ್ದಾದರೆ ಏನಾಗುತ್ತದೆ?
ಮಳೆಯಿಂದಾಗಿ ಪಂದ್ಯ ರದ್ದುಗೊಂಡರೆ, ಸೆಮಿಫೈನಲ್ಗೆ ಯಾರು ಪ್ರವೇಶ ಪಡೆಯುತ್ತಾರೆ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಈ ರೀತಿಯಾದಲ್ಲಿ ಸೂಪರ್-8 ಸುತ್ತಿನಲ್ಲಿ ಭಾರತವು ತನ್ನ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದು, ಆ ಮೂಲಕ ಭಾರತ ತಂಡವು ಫೈನಲ್ಗೆ ತಲುಪುತ್ತದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ 2ನೇ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಆಂಗ್ಲ ತಂಡಕ್ಕೆ ಮತ್ತೆ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ. ಸತತ ಎರಡನೇ ಬಾರಿ ಚಾಂಪಿಯನ್ ಆಗುವ ಅವರ ಕನಸು ಭಗ್ನವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಂಬರ್-1 ಸ್ಥಾನದಲ್ಲಿವೆ:
ಸೂಪರ್-8 ಗುಂಪು 1ರಲ್ಲಿ ಭಾರತ ಮೊದಲ ಸ್ಥಾನ ಗಳಿಸಿತು. ಅಫ್ಘಾನಿಸ್ತಾನ ಎರಡನೇ, ಆಸ್ಟ್ರೇಲಿಯಾ ಮೂರನೇ ಮತ್ತು ಬಾಂಗ್ಲಾದೇಶ ನಾಲ್ಕನೇ ಸ್ಥಾನ ಪಡೆದಿವೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಗುಂಪು-2ರಲ್ಲಿ ನಂಬರ್ ಒನ್ ಆಗಿದೆ.. ಎರಡೂ ಸೆಮಿಫೈನಲ್ ಪಂದ್ಯಗಳು ಮಳೆಯಿಂದಾಗಿ ರದ್ದಾದರೇ ಇಲ್ಲಿಯವರೆಗೆ ಹೆಚ್ಚು ಗೆಲುವು ಸಾಧಿಸಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ತಲುಪಲಿವೆ. ಒಂದು ವೇಳೆ ಫೈನಲ್ ಪಂದ್ಯವೂ ಮಳೆಯಿಂದಾಗಿ ರದ್ದಾದರೆ ಎರಡೂ ತಂಡಗಳನ್ನು ವಿಜೇತರೆಂದು ಘೋಷಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.