Viral Video: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು!

Shocking Viral Video: ಉತ್ತರಪ್ರದೇಶದ ಮಹೋಬಾದಲ್ಲಿ 30 ವರ್ಷದ ವ್ಯಕ್ತಿ ಬ್ಯಾಂಕಿನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜೇಶ್ ಕುಮಾರ್ ಶಿಂಧೆ ಎಂದು ಗುರುತಿಸಲಾಗಿದೆ. ಇವರು ಮಹೋಬಾದ HDFC ಬ್ಯಾಂಕಿನ ಶಾಖೆಯಲ್ಲಿ ಅಗ್ರಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.

Written by - Puttaraj K Alur | Last Updated : Jun 27, 2024, 06:42 PM IST
  • ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು
  • ಬ್ಯಾಂಕಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಸಾವಿನ ಭಯಾನಕ ದೃಶ್ಯ
  • ಇದು ಕೊರೊನಾ ಲಸಿಕೆಯ ಎಫೆಕ್ಟ್‌‌ ಎನ್ನುತ್ತಿದ್ದಾರೆ ನೆಟಿಜನ್ಸ್!
Viral Video: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು! title=
ಸಾವಿನ ಭಯಾನಕ ದೃಶ್ಯ!

Shocking Viral Video: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಈ ಭಯಾನಕ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಸಾವು ಯಾರಿಗೆ? ಹೇಗೆ..? ಯಾವ ಕ್ಷಣದಲ್ಲಾದರೂ ಬರುತ್ತದೆ ಅನ್ನೋದಕ್ಕೆ ನಿದರ್ಶನದಂತಿದೆ. 

ಉತ್ತರ ಪ್ರದೇಶದ ಮಹೋಬಾದಲ್ಲಿ 30 ವರ್ಷದ ವ್ಯಕ್ತಿ ಬ್ಯಾಂಕಿನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜೇಶ್ ಕುಮಾರ್ ಶಿಂಧೆ ಎಂದು ಗುರುತಿಸಲಾಗಿದೆ. ಇವರು ಮಹೋಬಾದ HDFC ಬ್ಯಾಂಕಿನ ಶಾಖೆಯಲ್ಲಿ ಅಗ್ರಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ 41 ಸಾವಿರ ವರ್ಷಗಳಷ್ಟು ಹಳೆಯ ಆಸ್ಟ್ರಿಚ್ ಗೂಡು ಪತ್ತೆ

ಮೃತ ರಾಜೇಶ್ ಕುಮಾರ್ ಅವರು ತಮ್ಮ ಲ್ಯಾಪ್‌ಟಾಪ್ ಮುಂದೆ ಕೆಲಸ ಮಾಡುತ್ತಿದ್ದದರು. ಹಠಾತ್ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುರ್ಚಿಯ ಮೇಲೆ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಈ ಘಟನೆಯು ಜೂನ್ 19ರಂದು ಬ್ಯಾಂಕಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ಹಠಾತ್‌ ಕುಸಿದುಬಿದ್ದು ಮೃತಪಟ್ಟ ರಾಜೇಶ್ ಕುಮಾರ್‌ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದು ಕೊರೊನಾ ಲಸಿಕೆಯ ಪ್ರಭಾವ ಅಂತಾ ಅನೇಕರು ಆರೋಪಿಸಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡ ಅನೇಕರಿಗೆ ಹಠಾತ್‌ ಹೃದಯಾಘಾತವಾಗುತ್ತಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. 

ಇದನ್ನೂ ಓದಿ: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ..! ಮಕ್ಕಳಿಗೆ ತಿಮ್ಮಪ್ಪನ ದರ್ಶನ ಉಚಿತ.. ವಯಸ್ಸು ಇಷ್ಟಾಗಿರಬೇಕು..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News