ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಇವು ಭಗವಾನ್ ಶ್ರೀಕೃಷ್ಣನ ಅತ್ಯಂತ ಮೆಚ್ಚಿನ ರಾಶಿಗಳು: ಬೇಡಿದ ತಕ್ಷಣ ಅನಂತ ಸಿರಿ ಸಂಪತ್ತಿನ್ನೇ ಧಾರೆ ಎರೆಯುತ್ತಾನೆ ದೇವಕಿಸುತ
ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕೊರೊನಾ ಸಂದರ್ಭದಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದನ್ನು ಮರೆಯಲು ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ ಎಂದರು.
ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ ಎಂದರು.
ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ವೈದ್ಯರು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು. ಸಿಡುಬು, ಪ್ಲೇಗ್, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿದ್ದು, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದರು.
ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು. ಹಿಂದೆ ನಮಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದೆ ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.
ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ.
ಅನುದಾನ: ವೈದ್ಯರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಆರೋಗ್ಯಕರ ಸಮಾಜ ನಿರ್ಮಾಣ
ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಶಿಕ್ಷಣ ಮತ್ತು ಆರೋಗ್ಯ ಬಹಳ ಮುಖ್ಯ. ಪ್ರತಿಯೊಬ್ಬರೂ ಆರೋಗ್ಯವಂತರಾಗಿ, ಆರ್ಥಿಕ ಶಕ್ತಿ ಹೊಂದಿದ್ದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ವೈದ್ಯರು ಬಿ.ಸಿ.ರಾಯ್ ಅವರ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಸಿಎಂ ತಿಳಿಸಿದರು.
ಇದನ್ನೂ ಓದಿ: ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!
ಸನ್ಮಾನ: ಜೀವಮಾನ ಸಾಧನೆ ಹಾಗೂ ಇತರ ಪ್ರಶಸ್ತಿಗಳಿಗೆ ಭಾಜನರಾದ ವೈದ್ಯರನ್ನು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ