Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!

Karnataka Gruha Lakshmi Yojana: ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ NPCI ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Written by - Puttaraj K Alur | Last Updated : Jul 3, 2024, 04:02 PM IST
  • ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ
  • ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ
  • ಹಣ ಬರದಿದ್ದವರು ತಪ್ಪದೇ NPCI ಸಕ್ರಿಯವಾಗಿದೆಯೇ ಎಂದು ಚೆಕ್‌ ಮಾಡಿ
Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ! title=
ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲವೇ?

Gruha Lakshmi Yojana: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ NPCI ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಇಲ್ಲಿವರೆಗೂ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.  

ಇದನ್ನೂ ಓದಿ: MG Electric Car: ಶೀಘ್ರವೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ MG ಎಲೆಕ್ಟ್ರಿಕ್‌ ಕಾರು!

ಖಾತೆಗೆ ಹಣ ಜಮಾ ಆಗಿಲ್ಲವೇ? ಈ ರೀತಿ ಚೆಕ್‌ ಮಾಡಿ

  • ಮೊದಲಿಗೆ ಇ-ಆಡಳಿತ ಇಲಾಖೆಯಿಂದ ಅಭಿವೃದ್ದಿಪಡಿಸಿರುವ ʻDBT Karnatakaʼ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್‌ ಮಾಡಿಕೊಳ್ಳಬೇಕು.
  • ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಧಿಕೃತ DBT Karnataka mobile appನ್ನು ಡೌನ್ಲೋಡ್ ಮಾಡಿಕೊಂಡು ಇನ್‌ಸ್ಟಾಲ್‌ ಮಾಡಿಕೊಳ್ಳಬೇಕು.
  • ಅರ್ಜಿದಾರರು ತಮ್ಮ 12 ಅಂಕಿಯ ಆಧಾರ್ ಕಾರ್ಡ ಸಂಖ್ಯೆ ಹಾಕಿ ನಿಮ್ಮ ಆಧಾರ್‌ನಲ್ಲಿರುವಂತೆ ಹೆಸರನ್ನು ನಮೂದಿಸಿ, ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTPನ್ನು ನಮೂದಿಸಬೇಕು.
  • 4 ಅಂಕಿಯ ಪಾಸ್‌ವರ್ಡ್ ರಚಿಸಿ ನಮೂದಿಸಬೇಕು.
  • ಕೊನೆಯ ಕಾಲಂನಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ʼRightʼ ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  • "Login" ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ "Payment status" ಬಟನ್ ಮೇಲೆ ಕ್ಲಿಕ್ ಮಾಡಿ "ಗೃಹಲಕ್ಷ್ಮಿ" ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ ಈ ಯೋಜನೆಯಡಿ ಪ್ರತಿ ತಿಂಗಳು ಯಾವ ಯಾವ ದಿನಾಂಕದಂದು ಹಣ ಜಮಾ ಅಗಿದೆ ಹಾಗೂ UTR ನಂಬರ್, ಬ್ಯಾಂಕಿನ ಹೆಸರು, ಬ್ಯಾಂಕ್ ಅಕೌಂಟಿನ ಕೊನೆಯ 4 ಸಂಖ್ಯೆ, ಬ್ಯಾಂಕ್ ಖಾತೆದಾರರ ಹೆಸರಿನ ವಿವರ ತೋರಿಸುತ್ತದೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಸಾಲ 171‌ ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದ ಹಣಕಾಸು ಸಚಿವಾಲಯ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News