Appu cup season 2 teams : ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು. ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಸಾ.ರಾ.ಗೋವಿಂದು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಶೆಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.
ಇದನ್ನೂ ಓದಿ:'ನಿನಗಾಗಿ' ಎನ್ನುತ್ತ ಬಹಳ ವರ್ಷಗಳ ನಂತರ ಕಿರುತೆರೆಯತ್ತ ದಿವ್ಯ ಜೊತೆ ಬಂದ ಯತಿರಾಜ್..!
'ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಡೆಯುತ್ತಿರುವ "ಅಪ್ಪು ಕಪ್ ಸೀಸನ್ ೨" ಯಶಸ್ವಿಯಾಗಲಿ' ಎಂದು ಶ್ರೀಮುರಳಿ ಹಾರೈಸಿದರು.
'ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ "ಅಪ್ಪು ಕಪ್" ಶೆಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ ನೂರು ಗ್ರಾಮ್ ಬಂಗಾರ, ದ್ವಿತೀಯ ವಿಜೇತರಿಗೆ ಐವತ್ತು ಗ್ರಾಮ್ ಬಂಗಾರ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಬಂಗಾರವನ್ನು ಬಹುಮಾನ ನೀಡುವುದಾಗಿ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ತಿಳಿಸಿದರು.
ಇದನ್ನೂ ಓದಿ: ತಮಿಳಿಗೆ ನಾಯಕನಾಗಿ ಪಾದಾರ್ಪಣೆ ಮಾಡಲಿರುವ ಶಿವಣ್ಣ, ಕನ್ನಡದ ಸೂಪರ್ಸ್ಟಾರ್ ಚೊಚ್ಚಲ ತಮಿಳು ಸಿನಿಮಾ ಇದೇ ನೋಡಿ ...!
ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ "ಅಪ್ಪು ಕಪ್" ಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ. ಈ ಬಾರಿ ಟೂರ್ನಿಯಲ್ಲಿ ಹತ್ತು ತಂಡಗಳಿದೆ. ಹತ್ತು ತಂಡಗಳ ಮಾಲೀಕರಿಗೆ, ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರಿಗೆ ಹಾಗೂ ಎಲ್ಲಾ ತಂಡಗಳ ಮಾಲೀಕರಿಗೆ, ಆಟಗಾರರಿಗೆ ಧನ್ಯವಾದ ತಿಳಿಸಿದ "ಅಪ್ಪು ಕಪ್" ನ ರುವಾರಿ ಚೇತನ್ ಸೂರ್ಯ, ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ಹತ್ತು ತಂಡಗಳ ಲೋಗೊ, ಜರ್ಸಿ ಅನಾವರಣ ಮಾಡಿ, ತಂಡದ ಮಾಲೀಕರ ಹಾಗೂ ಆಟಗಾರರ ಪರಿಚಯ ಮಾಡಿಕೊಡಲಾಯಿತು. ALL OK (ಅಲೋಕ್), ಸಮರ್ಜಿತ್ ಲಂಕೇಶ್, ಐಶ್ವರ್ಯ ಸಿಂದೋಗಿ, ಅಭಿಲಾಶ್ ದಳಪತಿ, ಕಾವ್ಯ ಶಾ, ಶರತ್ ಕ್ಷತ್ರಿಯ, ದಿಲೀಪ್ ಕೆಂಪೇಗೌಡ, ಸಿರಿ ರಾಜು, ರಾಮ್ ಪವನ್, ಐಶಾನ, ಲಾವಣ್ಯ, ದೇವನ್, ರಾಘವ್ ನಾಗ್, ಸುನಾಮಿ ಕಿಟ್ಟಿ, ವಿಜಯ್ ಸಿದ್ದರಾಜ್, ವ್ಯಾಸರಾಜ ಸೋಸಲೆ, ಜ್ಯೋತಿ ವ್ಯಾಸರಾಜ್ ಸೇರಿದಂತೆ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು.
"ಅಪ್ಪು ಕಪ್" ನಲ್ಲಿ ಆಡುತ್ತಿರುವ ತಂಡಗಳು ಹೀಗಿದೆ.
1) ಅರಸು ಹಂಟರ್ಸ್ ಮಾಲೀಕರು ಆನಂದ್ (PRO Win management). ನಾಯಕ ಹರೀಶ್ ನಾಗರಾಜ್.
2) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ (Oirgin Ventures), ನಾಯಕ ರವಿ ಚೇತನ್.
3) ಪವರ್ ಪೈತಾನ್ಸ್ ಮಾಲೀಕರು ಐಶ್ವರ್ಯ (SN Jals Events), ನಾಯಕ ಸದಾಶಿವ ಶೆಣೈ.
4) ದೊಡ್ಮನೆ ಡ್ರಾಗನ್ಸ್ ಮಾಲೀಕರು ಮಹೇಶ್ ಗೌಡ, (MKJ Group), ನಾಯಕ ಪ್ರಮೋದ್ ಶೆಟ್ಟಿ.
5) ಜಾಕಿ ರೈಡರ್ಸ್ ಮಾಲೀಕರು ಶ್ರೀಹರ್ಷ (Sri Entertainments), ನಾಯಕ ಮನು ರವಿಚಂದ್ರನ್
6) ರಾಜಕುಮಾರ ಕಿಂಗ್ಸ್ (Kings Club), ಮಾಲೀಕರು ವಿ.ರವಿಕುಮಾರ್ & ಶಂಶುದ್ದೀನ್, ನಾಯಕ ವಿಕ್ರಮ್ ರವಿಚಂದ್ರನ್,
7) ಗಂಧದಗುಡಿ ವಾರಿಯರ್ಸ್ ಮಾಲೀಕರು ಡಾ||ಚೇತನ ಆರ್ ಎಸ್, (Kalaluha), ನಾಯಕ ಭುವನ್ ಗೌಡ
8) ವೀರ ಕನ್ನಡಿಗ ಬುಲ್ಸ್ ಮಾಲೀಕರು ಮೋನೀಶ್ ಸಿ.(Builder), ನಾಯಕ ದಿಲೀಪ್ ರಾಜ್.
9) ಯುವರತ್ನ ಚಾಂಪಿಯನ್ಸ್ ಮಾಲೀಕರು ಬಿ.ಎಂ.ಶ್ರೀರಾಮ್ ಕೋಲಾರ್ (Deepa Films), ನಾಯಕ ಪ್ರವೀಣ್ ತೇಜ್,
10) ಮೌರ್ಯ ವೈಟ್ ಗೋಲ್ಡ್, ಮಾಲೀಕರು ಬಾಬು ಸಿ.ಜೆ(White Gold), ನಾಯಕ ನಿರಂಜನ್ ದೇಶಪಾಂಡೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.