ಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ - ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ

Heavy Rain Alert : ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಎರಡು ದಿನ ಭರ್ಜರಿ ಮಳೆ ಸುರಿಯಲಿದೆ.

Written by - Ranjitha R K | Last Updated : Jul 17, 2024, 11:14 AM IST
  • ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ
  • ಕರಾವಳಿ ಭಾಗದಲ್ಲಿ ಬಿಡದೇ ಮಳೆ ಸುರಿಯುತ್ತಿದೆ
  • ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ
ಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ - ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ title=

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ, ಅದರಲ್ಲಿಯೂ ಕರಾವಳಿ ಭಾಗದಲ್ಲಿ ಬಿಡದೇ ಮಳೆ ಸುರಿಯುತ್ತಿದೆ. ಮಳೆಗಾಗಿ ಪ್ರಾರ್ಥಿಸುತ್ತಿದ್ದ ಜನ ಇದೀಗ ಸೂರ್ಯ ದೇವನ ದರ್ಶನ ಯಾವಾಗ ಆಗುತ್ತದೆಯೋ ಎಂದು ಕಾಯುವಂತಾಗಿದೆ. ಈ ನಡುವೆ  ಮತ್ತೆ ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ. 

ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಎರಡು ದಿನ ಭರ್ಜರಿ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮುನ್ಸೂಚನೆಯನ್ನು 
ರಾಜ್ಯ ಹವಮಾನ ಇಲಾಖೆ ನೀಡಿದೆ. 

ಇದನ್ನೂ ಓದಿ : Prajwal Revanna Case: ಸದನದಲ್ಲೇ ಕಣ್ಣೀರು ಹಾಕಿದ ಮಾಜಿ ಸಚಿವ ಎಚ್.ಡಿ.ರೇವಣ್ಣ!

ಇದಲ್ಲದೆ, ಜುಲೈ 19ರಿಂದ ಅಂದರೆ ವಾಯುಭಾರ ಕುಸಿತದ ನಂತರವೂ ಮಳೆ ಅಬ್ಬರ ಕಡಿಮೆಯಾಗುವ ಲಕ್ಷಣಗಳಿಲ್ಲ. ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಜುಲೈ 19ರಿಂದ  ರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ : ಪವಿತ್ರಾಗೌಡ ಮಾತ್ರವಲ್ಲದೇ ದರ್ಶನ್‌ ಜೊತೆಗೂ ಮಾತುಕತೆ ನಡೆಸಿದ್ದ ಸಮತಾ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News