ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಆಗ್ರಹ

ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Jul 18, 2024, 06:05 PM IST
  • ಹಿಂದಿನ ಸರ್ಕಾರದ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ ಬೆಳಗಾವಿ ನಡುವೆ ಕಿತ್ತೂರು ಹಾಗೂ ಕಲಬುರ್ಗಿಯಲ್ಲಿ ಎರಡು ಪ್ರತ್ಯೇಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಯೋಜನೆ ರೂಪಿಸಿತ್ತು.
  • ಆದರೆ, ಆ ಯೋಜನೆ ನೆನೆಗುದಿಗೆ ಬಿದ್ದಿದ್ದು, ಹಾಲಿ ರಾಜ್ಯ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಬೇಕು.
ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಆಗ್ರಹ title=

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಮಾನ್ಯತೆ‌ ಪಡೆದಿದ್ದು, ಐಟಿ, ಬಿಟಿ, ಸ್ಟಾರ್ಟ್ ಅಪ್, ಯುನಿಕಾರ್ನ್ ಸೇರಿದಂತೆ ಎಲ್ಲ ರಂಗದ  ಉದ್ಯಮಗಳು ಇಲ್ಲಿಯೇ ಸ್ಥಾಪನೆ ಆಗುತ್ತಿರುವುದರಿಂದ ಈ ನಗರಕ್ಕೆ ವಲಸೆ ಬರುವವರ ಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಒತ್ತಡ ಹೆಚ್ಚುತ್ತಿದೆ.No description available.

ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು :ಇಂದಿನಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ

ಹಿಂದಿನ ಸರ್ಕಾರದ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ ಬೆಳಗಾವಿ ನಡುವೆ ಕಿತ್ತೂರು ಹಾಗೂ ಕಲಬುರ್ಗಿಯಲ್ಲಿ ಎರಡು ಪ್ರತ್ಯೇಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಯೋಜನೆ ರೂಪಿಸಿತ್ತು. ಆದರೆ, ಆ ಯೋಜನೆ ನೆನೆಗುದಿಗೆ ಬಿದ್ದಿದ್ದು, ಹಾಲಿ ರಾಜ್ಯ  ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಬೇಕು. ಇದರಿಂದ ನಮ್ಮ ಭಾಗದ ವಾಣಿಜ್ಯೋದ್ಯೋಮ, ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಪ್ತು ಮಾಡಲು ಅನುಕೂಲವಾಗಲಿದ್ದು, ರೈತರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ. ಅಲ್ಲದೇ ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಿ ಉದ್ಯೋಗವಕಾಶಗಳು ಹೆಚ್ಚಾಗುತ್ತವೆ. ಈ ಮೂಲಕ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಿಗಳು, ರೈತ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಚರ್ಚಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News