ನವದೆಹಲಿ: ಮಾಹಿತಿ ಹಕ್ಕಿನ ಅಡಿಯಲ್ಲಿ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಕೇಳಿದ ಮಾಹಿತಿಗೆ ಉತ್ತರ ನೀಡಿರುವ ಕೇಂದ್ರ ಗೃಹ ಸಚಿವಾಲಯ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿಯನ್ನು ಹೊಂದಿಲ್ಲ ಎಂದು ಹೇಳಿದೆ.
ಈ ಪದವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ವ್ಯಾಪಕವಾಗಿ ಬಳಸುತ್ತಿದ್ದರಿಂದ ಆರ್ಟಿಐ ಕಾರ್ಯಕರ್ತ ಸಾಕೇತ್ ಗೋಖ್ಲೆ ಅವರು ಕಳೆದ ವರ್ಷ ಡಿಸೆಂಬರ್ 26 ರಂದು ಸಲ್ಲಿಸಿದ್ದರು. ಈಗ ಈ ಕುರಿತಾಗಿ ಗೃಹ ಸಚಿವಾಲಯದಿಂದ ಉತ್ತರ ಪಡೆದಿರುವ ಅವರು 'ಗೃಹ ವ್ಯವಹಾರಗಳ ಸಚಿವಾಲಯವು ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿಯನ್ನು ಹೊಂದಿಲ್ಲ' ಎಂದು ತಿಳಿಸಿದೆ.
PEOPLE - IT'S OFFICIAL
The Home Ministry has responded to my RTI saying:
"Ministry of Home Affairs has no information concerning tukde-tukde gang."
Maanyavar is a liar.
The "tukde tukde gang" does not officially exist & is merely a figment of Amit Shah's imagination. pic.twitter.com/yaUGjrqI4f
— Saket Gokhale (@SaketGokhale) January 20, 2020
ಇನ್ನೊಂದೆಡೆಗೆ ಗೃಹ ಸಚಿವಾಲಯದ ಆರ್ಟಿಐ ಉತ್ತರಕ್ಕೆ ಪ್ರತಿಕ್ರಿಯಿಸಿದ ಗೋಖ್ಲೆ, "ತುಕ್ಡೆ-ತುಕ್ಡೆ ಗ್ಯಾಂಗ್" ಅಧಿಕೃತವಾಗಿ ಅಸ್ತಿತ್ವದಲ್ಲಿಲ್ಲ ಮತ್ತು ಇದು ಕೇವಲ ಅಮಿತ್ ಷಾ ಅವರ ಕಲ್ಪನೆಯ ಒಂದು ಆಕೃತಿ ಎಂದು ಹೇಳಿದರು. 'ದೆಹಲಿಯ ತುಕ್ಡೆ-ತುಕ್ಡೆ ಗ್ಯಾಂಗ್ಗೆ ಪಾಠ ಕಲಿಸಿ ಶಿಕ್ಷೆ ವಿಧಿಸಬೇಕಾಗಿದೆ" ಎಂಬ ಇತ್ತೀಚಿನ ಹೇಳಿಕೆಗಾಗಿ ಗೃಹ ಸಚಿವ ಅಮಿತಾ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಕೇಳಿಕೊಳ್ಳುವುದಾಗಿ ಅವರು ಹೇಳಿದರು.
ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಲ್ಲಿ ಮುಸ್ಲಿಮೇತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆ ಮಾಡುವ ಹೊಸ ಪೌರತ್ವ ಕಾಯ್ದೆಯನ್ನು ಸಂಸತ್ತು ಅಂಗೀಕರಿಸಿದ ನಂತರ, ಈ ಕಾಯ್ದೆಯನ್ನು ಖಂಡಿಸಿ ದೇಶಾದ್ಯಂತ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದವು. ಪ್ರತಿಭಟನೆಗೆ ಕಾಂಗ್ರೆಸ್ ಮತ್ತು ಇತರರಿಗೆ 'ತುಕ್ಡೆ-ತುಕ್ಡೆ ಗ್ಯಾಂಗ್' ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದರು.
ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಇಲ್ಲದಿದ್ದರೆ, ನಾವು ಯಾವಾಗಲೂ ನ್ಯಾಯಾಂಗವನ್ನು ಸಂಪರ್ಕಿಸಬೇಕಾಗುತ್ತದೆ. ನಾನು 'ತುಕ್ಡೆ-ತುಕ್ಡೆ ಗ್ಯಾಂಗ್' ಎಂದು ಕರೆಯಲ್ಪಡುವ ಜನರೊಂದಿಗೆ ಮಾತನಾಡುತ್ತೇನೆ ಮತ್ತು ಮಾನಹಾನಿ ಪ್ರಕರಣವನ್ನು ದಾಖಲಿಸುತ್ತೇವೆ ಏಕೆಂದರೆ ಇದನ್ನು ನಿಲ್ಲಿಸಬೇಕಾಗಿದೆ ಎಂದು' ಗೋಖಲೆ ಹೇಳಿದ್ದಾರೆ.