ದಿನಭವಿಷ್ಯ 23-07-2024: ಇಂದು ಆಯುಷ್ಮಾನ್ ಯೋಗ ಈ ರಾಶಿಯವರಿಗೆ ಕೆಲಸದಲ್ಲಿ ಪ್ರಗತಿ, ವ್ಯವಹಾರದಲ್ಲಿ ಯಶಸ್ಸು

Today Horoscope 23rd July 2024: ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 23, 2024, 08:02 AM IST
  • ಕರ್ಕಾಟಕ ರಾಶಿಯವರು ಇಂದು ಹೂಡಿಕೆಯಿಂದ ಉತ್ತಮ ಆದಾಯವನ್ನು ನಿರೀಕ್ಷಿಸಬಹುದು.
  • ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವೃಶ್ಚಿಕ ರಾಶಿಯ ಜನರಿಗೆ ಯಶಸ್ಸು
  • ಕುಂಭ ರಾಶಿಯ ವಿದ್ಯಾರ್ಥಿಗಳು ಹೊಸ ವಿಷಯವನ್ನು ಕಲಿಯಲು ಹೆಚ್ಚು ಶ್ರಮವಹಿಸಬೇಕು.
ದಿನಭವಿಷ್ಯ 23-07-2024:  ಇಂದು ಆಯುಷ್ಮಾನ್ ಯೋಗ ಈ ರಾಶಿಯವರಿಗೆ ಕೆಲಸದಲ್ಲಿ ಪ್ರಗತಿ, ವ್ಯವಹಾರದಲ್ಲಿ ಯಶಸ್ಸು  title=

Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಮಂಗಳವಾರದ ಈ ದಿನ ಧನಿಷ್ಠ ನಕ್ಷತ್ರ, ಆಯುಷ್ಮಾನ್ ಯೋಗ ಇರಲಿದ್ದು ಯಾವ ರಾಶಿಯ ಜನರಿಗೆ ಏನು ಫಲ ಎಂದು ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ವೈವಾಹಿಕ ಜೀವನವು  ಸಂತೋಷದಿಂದ ಕೂಡಿರಲಿದೆ. ಉದ್ಯೋಗಿಗಳು ಕೆಲಸದ ಸ್ಥಳದಲ್ಲಿ ನಿಮ್ಮ ಕೋಪವನ್ನು ನಿಯಂತ್ರಿಸಬೇಕು. ಇಲ್ಲದಿದ್ದರೆ, ಅದರಿಂದಲೇ ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗಬಹುದು. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಸರ್ಕಾರಿ ನೌಕರರು ಇಂದು ಪ್ರಾಮಾಣಿಕತೆಯಿಂದ ಕೆಲಸ ಮಾಡುವುದರಿಂದ ಶುಭವಾಗಲಿದೆ. ಕುಟುಂಬದಲ್ಲಿ ನಿಮ್ಮೆಲ್ಲಾ ಯೋಜನೆಗಳಿಗೆ ಸಹೋದರವರ್ಗದವರ ಬೆಂಬಲ ದೊರೆಯಲಿದೆ. ವ್ಯವಹಾರದಲ್ಲಿ ಕಠಿಣ ಪರಿಶ್ರಮದ ಸಂಪೂರ್ಣ ಫಲ ಪ್ರಾಪ್ತಿಯಾಗಲಿದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಈ ರಾಶಿಯ ವೃತ್ತಿಪರರು ಇಂದು ಉದ್ಯೋಗದಲ್ಲಿ ಬಡ್ತಿಯನ್ನು ನಿರೀಕ್ಷಿಸಬಹುದು. ಆದಾಗ್ಯೂ, ಸಹೋದ್ಯೋಗಿಗಳೊಂದಿಗೆ ಮಾತನಾಡುವಾಗ ಮಧುರತೆಯನ್ನು ಕಾಪಾಡಿಕೊಳ್ಳಿ. ಹಿರಿಯರ ಸಲಹೆಯಂತೆ ಮುಂದುವರೆದರೆ ಕುಟುಂಬದಲ್ಲಿ ಸಮಸ್ಯೆಗಳು ಬಗೆಹರಿಯಲಿವೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ಅನುಭವಿಸುವಿರಿ. ವ್ಯಾಪಾರಸ್ಥರಿಗೆ ಹೊಸ ಯೋಜನೆಗಳಲ್ಲಿ ಕೆಲಸ ಮಾಡುವುದು ಹೆಚ್ಚಿನದನ್ನು ಕಲಿಯಲು ಸಹಕಾರಿ ಆಗಲಿದೆ. ಹೂಡಿಕೆಯಿಂದ ಉತ್ತಮ ಆದಾಯವನ್ನು ನಿರೀಕ್ಷಿಸಬಹುದು. 

ಇದನ್ನೂ ಓದಿ- 100 ವರ್ಷಗಳ ನಂತರ ಒಟ್ಟೊಟ್ಟಿಗೆ ಎರಡು ರಾಜಯೋಗಗಳ ನಿರ್ಮಾಣ: ಆರು ರಾಶಿಯವರಿಗೆ ಸಕಲ ಸುಖ-ಸಂಪತ್ತು ಪ್ರಾಪ್ತಿ!

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಈ ರಾಶಿಯ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಿ ಓದಬೇಕು. ಉದ್ಯೋಗಸ್ಥರಿಗೆ ಕೆಲಸದಲ್ಲಿ ಮೂಡಿದ್ದ ಅಡೆತಡೆಗಳು ನಿವಾರಣೆಯಾಗಿ ಮನಸ್ಸಿಗೆ ನೆಮ್ಮದಿಯನ್ನು ಕಾಣುವಿರಿ. ಇಂದು ಯಾರಿಂದಲಾದರೂ ಸಾಲ ಪಡೆಯುವುದನ್ನು ತಪ್ಪಿಸಿ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ನಿಮ್ಮ ಸಾಮಾಜಿಕ ವಲಯ ಇಂದು ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಾಗಬಹುದು. ಆದಾಗ್ಯೂ, ವ್ಯವಹಾರದಲ್ಲಿ ಇಂದು ಬಂಪರ್ ಲಾಭವನ್ನು ನಿರೀಕ್ಷಿಸಬಹುದು. ಉದ್ಯೋಗದಲ್ಲೂ ಪ್ರಗತಿಯನ್ನು ಕಾಣಬಹುದು. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಈ ರಾಶಿಯ ಜನರಿಗೆ ನಿಮ್ಮ ದಾಂಪತ್ಯ ಜೀವನದಲ್ಲಿ ಮೂಡಿದ್ದ ಬಿರುಕುಗಳು ನಿವಾರಣೆಯಾಗುತ್ತವೆ. ಆದರೆ, ಇಂದು ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕು. ಬೇರೆಯವರಿಗೆ ಸಾಲ ನೀಡುವುದನ್ನು ತಪ್ಪಿಸಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಯಶಸ್ಸು, ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲಿ ಮನ್ನಣೆ, ಕೀರ್ತಿ ಹೆಚ್ಚಾಗಲಿದೆ. ಸರ್ಕಾರದ ಯೋಜನೆಗಳಿಂದ ಲಾಭವನ್ನು ಪಡೆಯುವಿರಿ. ದಾಂಪತ್ಯ ಸುಖ ಹೆಚ್ಚಾಗಲಿದೆ. 

ಇದನ್ನೂ ಓದಿ- ಶೀಘ್ರದಲ್ಲೇ ಮುಖಾಮುಖಿಯಾಗಲಿದ್ದಾರೆ ಶನಿ-ಬುಧ: ವೃತ್ತಿ ಬದುಕಿನಲ್ಲಿ ಭಾರೀ ಜಯ ಸಾಧಿಸಲಿದ್ದಾರೆ ಈ ರಾಶಿಯ ಜನ

ಧನು ರಾಶಿಯವರ ಭವಿಷ್ಯ (Sagittarius Horoscope):  
ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ. ಆದರೆ, ನೌಕರರು ಇಂದು ಸೋಮಾರಿತನ ಬಿಟ್ಟು ಕೆಲಸ ಮಾಡದಿದ್ದರೆ ಭಾರೀ ಸಂಕಷ್ಟಕ್ಕೆ ಗುರಿಯಾಗುವಿರಿ. ವ್ಯವಹಾರದಲ್ಲಿ ಲಾಭ, ಕುಟುಂಬ ಜೀವನದಲ್ಲಿ ಸಂತೋಷವನ್ನು ಅನುಭವಿಸುವಿರಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಈ ದಿನ ವೃತ್ತಿ ಹಾಗೂ ಕೌಟುಂಬಿಕ ಬದುಕಿನಲ್ಲಿ ನಿರ್ಮಾಣವಾಗಿದ್ದ ಪ್ರತೀಕೂಲ ಪರಿಸ್ಥಿತಿಗಳು ಬದಲಾಗುತ್ತವೆ. ಭವಿಷ್ಯವನ್ನು ಭದ್ರಪಡಿಸಲು ಹೂಡಿಕೆಯನ್ನು ಪರಿಗಣಿಸಿ. ಕೆಲವರು ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗುವ ಅವಕಾಶವನ್ನು ಪಡೆಯಬಹುದು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಸರ್ಕಾರಿ ಉದ್ಯೋಗಸ್ಥರಿಗೆ ವರ್ಗಾವಣೆಗೆ ಸಂಬಂಧಿಸಿದಂತೆ ಶುಭವಾರ್ತೆ ದೊರೆಯಲಿದೆ. ಪ್ರೀತಿ-ಪ್ರೇಮದಲ್ಲಿರುವವರಿಗೆ ಉತ್ತಮ ಸಮಯ. ವಿದ್ಯಾರ್ಥಿಗಳು ಹೊಸ ವಿಷಯವನ್ನು ಕಲಿಯಲು ಹೆಚ್ಚು ಶ್ರಮವಹಿಸಬೇಕು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಈ ರಾಶಿಯ ಜನರು ಇಂದು ಸ್ಪರ್ಧೆಗಳಲ್ಲಿ ಜಯ ಸಾಧಿಸುವರು. ದಿಢೀರ್ ಧನಲಾಭವು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದರಿಂದ ಮಾನಸಿಕ ನೆಮ್ಮದಿಯನ್ನು ಅನುಭವಿಸುವಿರಿ. ಆದರೆ, ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವಾಗ ಜಾಗರೂಕರಾಗಿರಿ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News