ಬೆಂಗಳೂರು: ಹಿರಿಯ ಸಂಶೋಧಕ ಎಂ. ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾದ ವಾಸುದೇವ್ ಭಗವಾನ್ ಸೂರ್ಯವಂಶಿ ಮತ್ತು ಅಮಿತ್ ಬಡ್ಡಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಇಬ್ಬರೂ ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿ ನ್ಯಾಯಮೂರ್ತಿ ಎಂ. ಜಿ ಉಮಾ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಇದನ್ನೂ ಓದಿ: ರಾಜ್ಯ ರಾಜಧಾನಿಯ ಅಭಿವೃದ್ದಿಗೆ ಗ್ರೇಟರ್ ಬೆಂಗಳೂರು ಬಿಲ್: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್, ಕಲಬುರ್ಗಿ ಅವರ ಕೊಲೆಗೆ ಬಳಸಲಾದ ವಾಹನ ಕಳವು ಮಾಡಲಾದ ಆರೋಪ ಮಾತ್ರ ಅರ್ಜಿದಾರರ ಮೇಲಿದೆ. ಈ ಸಂಬಂಧ ಆರೋಪಿಗಳು ಕಳೆದ ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲೂ ಆರೋಪಿಗಳ ಪಾತ್ರವಿದೆ. ಈ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಆ ಕೆಲಸವಾಗಿಲ್ಲ. ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷ್ಯಗಳ ಪೈಕಿ ಕೇವಲ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಹೀಗಾಗಿ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಇದನ್ನೂ ಓದಿ: ಇಷ್ಟವಿಲ್ಲದಿದ್ದರೂ ನಟಿ ಶ್ರುತಿ ಹಾಸನ್ ಜೊತೆ ಅಂಥಾ ಸೀನ್ ಮಾಡಬೇಕಾಯಿತು! ಖ್ಯಾತ ನಟನ ಹೇಳಿಕೆ
ಅಲ್ಲದೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ಇಬ್ಬರೂ ಆರೋಪಿಗಳ ವಿರುದ್ಧ ಗಂಭೀರ ಆರೋಪವಿದ್ದು, ಜಾಮೀನು ಮಂಜೂರು ಮಾಡಿದಲ್ಲಿ ಇಬ್ಬರ ವಿಚಾರಣೆಗೆ ಅಡ್ಡಿಯಾಗಲಿದೆ. ಮೇಲ್ನೋಟಕ್ಕೆ ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳು ಇವೆ. ಇದೊಂದು ಅತ್ಯಂತ ಹೀನಾಯ ಕೃತ್ಯವಾಗಿದ್ದು, ಜಾಮೀನು ಮಂಜೂರು ಮಾಡಿದಲ್ಲಿ ವಿಚಾರಣೆಗೆ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ