ಬೆಂಗಳೂರು : ಎನ್ ಟಿ ಟಿ ಡೇಟಾ ಸಂಸ್ಥೆ, ಅಕ್ಷಯ ಪಾತ್ರ ಫೌಂಡೇಷನ್ ಸಹಯೋಗದೊಂದಿಗೆ 4.73 ಕೋಟಿ ರು.ಅಂದಾಜು ವೆಚ್ಚದಲ್ಲಿ ಇಲ್ಲಿನ ಲಕ್ಷ್ಮೀಪುರದಲ್ಲಿ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಎನ್ ಟಿಟಿ ಡೇಟಾ ಸಂಸ್ಥೆಯ ಡಿಜಿಟಲ್ ಅಧಿಕಾರಿ ದಿಲೀಪ್ ಕುಮಾರ್, ಅಕ್ಷಯ ಪಾತ್ರ ಫೌಂಡೇಷನ್ ನ ಸಿಇಒ ಶ್ರೀಧರ್ ವೆಂಕಟ್, ಶಾಸಕ ಎಸ್. ಮುನಿರಾಜು, ಮಾಜಿ ಕ್ರಿಕೆಟಿಗ ವಿಜಯ್ ಭಾರಧ್ವಜ್, ಸೋಮವಾರ ಲೋಕಾರ್ಪಣೆ ಗೊಳಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಎನ್ ಟಿ ಟಿ ಡೇಟಾ ಇಂಕ್ ಸಂಸ್ಥೆಯ ಮುಖ್ಯ ಡಿಜಿಟಲ್ ಅಧಿಕಾರಿ ದಿಲೀಪ್ ಕುಮಾರ್ ಮಾತನಾಡಿ ''ಶಿಕ್ಷಣವು ಅವಕಾಶಗಳ ಬಾಗಿಲು ತೆರೆಯುವ ಕೀಲಿಕೈ ಇದ್ದಂತೆ, ಅಕ್ಷಯ ಪಾತ್ರ ಫೌಂಡೇಷನ್ ಮತ್ತು ಎನ್ ಟಿ ಟಿ ಡೇಟಾ ಸಂಸ್ಥೆಗಳ ನಡುವಿನ ಈ ಸಹಯೋಗವು ಪ್ರತಿಯೊಂದು ಮಗುವಿಗೂ ಪರಿಸ್ಥಿತಿ ಗಳನ್ನು ಮೀರಿದ ಕನಸುಗಳನ್ನು ನನಸು ಮಾಡುವತ್ತ ಸಾಗುವ ಅವಕಾಶವಾಗಿದೆ. ಈ ಮೂಲಕ ಯುವಜನತೆಯ ಸಾಮರ್ಥ್ಯವನ್ನು ಬೆಳೆಸುವ ಮತ್ತು ಪೋಷಿಸುವ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ ಎಂದರು.
ಇದನ್ನೂ ಓದಿ : ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಿದ್ದ ಖಾಕಿ..!
ಅಕ್ಷಯ ಪಾತ್ರ ಫೌಂಡೇಷನ್ ನ ಸಿಇಒ ಶ್ರೀಧರ್ ವೆಂಕಟ್ ಮಾತನಾಡಿ 'ಸರ್ಕಾರಿ ಶಾಲಾ ಮಕ್ಕಳ ಕಲಿಕೆಯ ಸ್ಥಳವನ್ನು ಶ್ರೀಮಂತ ಗೊಳಿಸುವ ಮೂಲಕ ದೀರ್ಘ ಕಾಲದ ಸಾಮಾಜಿಕ ಪರಿಣಾಮ ಉಂಟು ಮಾಡುವುದು ನಮ್ಮ ಉದ್ದೇಶವಾಗಿದ್ದು, ಈ ದಿಸೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಇದಕ್ಕೆ ಸಹಕರಿಸಿ, ನಮ್ಮೊಂದಿಗೆ ಕೈಜೋಡಿಸಿರುವ ಎನ್ ಟಿ ಟಿ ಡೇಟಾ ಸಂಸ್ಥೆಯ ಕಾರ್ಯಕ್ಕೆ ಕೃತಜ್ಞರಾಗಿರುತ್ತೇವೆ ಎಂದರು.
ಇದನ್ನೂ ಓದಿ : ಬೆಳಿಗ್ಗೆ ಬೇಗನೇ ಎದ್ದು ಸೆಲ್ನಲ್ಲಿ ಕೆಲಹೊತ್ತು ವಾಕಿಂಗ್
ಶಾಸಕ ಎಸ್.ಮುನಿರಾಜು ಮಾತನಾಡಿ 'ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಇಂದಿಗೂ ಹಲವಾರು ಹಳ್ಳಿಗಾಡಿನ ಶಾಲೆಗಳು ಸುಸ್ಥಿತಿಯಲ್ಲಿವೆ. ಈ ಹಿಂದೆ ಲಕ್ಷ್ಮೀಪುರದ ಈ ಶಾಲೆ ಬಹಳ ಅವ್ಯವಸ್ಥೆಯ ಸ್ಥಿತಿಯಲ್ಲಿತ್ತು, ಇದನ್ನು ಮನಗಂಡು ಎನ್ ಟಿ ಟಿ ಡೇಟಾ ಮತ್ತು ಅಕ್ಷಯಪಾತ್ರ ಫೌಂಡೇಷನ್ ಸಂಸ್ಥೆಗಳು ಸಹಯೋಗ ವಹಿಸಿಕೊಂಡು ಸುಸಜ್ಜಿತ ಶಾಲಾ ಕಟ್ಟಡವನ್ನು ನಿರ್ಮಿಸಿ ಲೋಕಾರ್ಪಣೆ ಮಾಡುವ ಮೂಲಕ ಬಡಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಇನ್ಫ್ರಾಸ್ಟ್ರಕ್ಚರ್ ಸರ್ವೀಸಸ್ ನ ಹಿರಿಯ ಉಪಾಧ್ಯಕ್ಷ ಆದಿತ್ಯ ಅಫ್ಜಲ್ಪುರ್ ಕರ್, ಎನ್ ಟಿ ಟಿ ಡೇಟಾ ಸಂಸ್ಥೆಯ ಉಪಾಧ್ಯಕ್ಷ ರವಿ ಕಲಗಟಕಿ, ಪ್ರಸಾದ್, ಬಿಇಓ ರಾಮಮೂರ್ತಿ ಬಿ.ಆರ್. ಸೇರಿದಂತೆ ಇನ್ನಿತರರಿದ್ದರು.
ಶಾಲೆಯಲ್ಲಿರುವ ಸೌಲಭ್ಯಗಳು : ಶಾಲೆಯಲ್ಲಿ 241 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಒಟ್ಟು 902 ಚದರ ವಿಸ್ತೀರ್ಣದಲ್ಲಿ ಎನ್ ಟಿ ಟಿ ಡೇಟಾ ಸಂಸ್ಥೆಯ ಸಿಎಸ್ ಆರ್ ಅನುದಾನದಲ್ಲಿ 4.73 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡದಲ್ಲಿ 8 ತರಗತಿ ಕೊಠಡಿಗಳು, ಕಂಪ್ಯೂಟರ್ ಲ್ಯಾಬ್, ಲೈಬ್ರರಿ, ಮುಖ್ಯ ಶಿಕ್ಷಕ ಮತ್ತು ಸಹಶಿಕ್ಷಕರ ಕೊಠಡಿ, ಸಿಸಿ ಟಿವಿ, ಶೌಚಾಲಯ, ಧ್ವನಿವರ್ಧಕ ವ್ಯವಸ್ಥೆ ಹಾಗೂ ಆ್ಯಂಪಿ ಥಿಯೆಟರ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.