Airtel Free Offer : ಕೇರಳದ ವಯನಾಡಿನಲ್ಲಿ ಸಂಭವಿಸುತ್ತಿರುವ ತೀವ್ರ ಭೂಕುಸಿತದ ನಡುವ ಟೆಲಿಕಾಂ ಕಂಪನಿ ಭಾರ್ತಿ ಏರ್‌ಟೆಲ್ ಪ್ರಮುಖ ಘೋಷಣೆ ಮಾಡಿದೆ. ಅದೇನೆಂದರೆ ಮಾನ್ಯತೆ ಅವಧಿ ಮುಗಿದ ಪ್ರಿಪೇಯ್ಡ್ ಗ್ರಾಹಕರಿಗೆ ಪ್ರತಿದಿನ 1 ಜಿಬಿ ಉಚಿತ ಡೇಟಾ ಮತ್ತು ಅನ್ಲಿಮಿಟೆಡ್ ಕಾಲಿಂಗ್ ಸೌಲಭ್ಯ ನೀಡುವುದಾಗಿ ಘೋಷಿಸಿದೆ. ಇದಲ್ಲದೆ,ಎಲ್ಲಾ ಪೋಸ್ಟ್‌ಪೇಯ್ಡ್ ಗ್ರಾಹಕರ ಬಿಲ್ ಪಾವತಿ ದಿನಾಂಕವನ್ನು 30 ದಿನಗಳವರೆಗೆ ವಿಸ್ತರಿಸಲಾಗಿದೆ.
ಮಂಗಳವಾರ, ಭಾರೀ ಮಳೆಯಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ಇದರಲ್ಲಿ ಕನಿಷ್ಠ 132 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಇದೀಗ ಪರಿಹಾರ ಕ್ರಮಗಳನ್ನು ಪ್ರಕಟಿಸಿದ ಭಾರ್ತಿ ಏರ್‌ಟೆಲ್,'ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಹಾನಿಗೊಳಗಾದ ಜನರೊಂದಿಗೆ ಏರ್‌ಟೆಲ್ ನಿಂತಿದೆ'ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಪ್ರಿಪೇಯ್ಡ್ ಗ್ರಾಹಕರಿಗೆ :
ರೀಚಾರ್ಜ್ ಮುಗಿದು ರೀಚಾರ್ಜ್ ಮಾಡಲು ಸಾಧ್ಯವಾಗದ ಗ್ರಾಹಕರಿಗೆ ಮೂರು ದಿನಗಳವರೆಗೆ ಪ್ರತಿದಿನ 1GB ಉಚಿತ ಡೇಟಾ, ಅನ್ಲಿಮಿಟೆಡ್ ಕಾಲಿಂಗ್ ಮತ್ತು 100 SMS ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಹೇಳಿದೆ.
ಪೋಸ್ಟ್‌ಪೇಯ್ಡ್ ಗ್ರಾಹಕರಿಗೆ :
ಎಲ್ಲಾ ಪೋಸ್ಟ್‌ಪೇಯ್ಡ್ ಗ್ರಾಹಕರ ಬಿಲ್ ಪಾವತಿ ದಿನಾಂಕವನ್ನು 30 ದಿನಗಳವರೆಗೆ ವಿಸ್ತರಿಸಲಾಗಿದೆ. ಅಂದರೆ ಬಿಲ್ ಪಾವತಿಸದಿದ್ದರೂ ಗ್ರಾಹಕರ ಮೊಬೈಲ್ ಸೇವೆಯಲ್ಲಿ ಯಾವುದೇ ಅಡಚಣೆ ಉಂಟಾಗುವುದಿಲ್ಲ.
ಇದನ್ನೂ ಓದಿ : ಟೆಲಿಗ್ರಾಮ್‌ನಲ್ಲಿ ಆ ಫೈಲ್ ಕ್ಲಿಕ್ ಮಾಡಬೇಡಿ; ಸೈಬರ್ ಸಂಶೋಧಕರಿಂದ ಎಚ್ಚರಿಕೆ, ಮುನ್ನೆಚ್ಚರಿಕೆ ಕ್ರಮಗಳು ಇಲ್ಲಿವೆ!!
ಏರ್‌ಟೆಲ್ ತನ್ನ ಎಲ್ಲಾ 52 ರಿಟೇಲ್ ಶಾಪ್ ಗಳನ್ನು ಕೇರಳದಲ್ಲಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ಮಾಡಿದೆ ಎಂದು ಕಂಪನಿ ಹೇಳಿದೆ. ಜನರು ಈ ಮಳಿಗೆಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ನೀಡಬಹುದು.ನಂತರ ಆ ಸಾಮಗ್ರಿಗಳನ್ನು ವಯನಾಡಿನ ಸಂತ್ರಸ್ತ ಜನರಿಗೆ ತಲುಪಿಸಲು ಸ್ಥಳೀಯ ಆಡಳಿತಕ್ಕೆ ನೀಡಲಾಗುವುದು.ಅದೇ ಸಮಯದಲ್ಲಿ,ಬುಧವಾರ, ಸೇನೆಯು ಕೇರಳದ ವಯನಾಡ್ ಜಿಲ್ಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ತೀವ್ರಗೊಳಿಸಿತು. ಇಲ್ಲಿನ ಭೂಕುಸಿತದಲ್ಲಿ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.