IND vs SL ODI: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ODI ಸರಣಿ ನಾಳೆಯಿಂದ ಕೊಲಂಬೊದಲ್ಲಿ ಪ್ರಾರಂಭವಾಗಲಿದೆ. ಮೊದಲ ಏಕದಿನ ಪಂದ್ಯ ನಾಳೆ ಮಧ್ಯಾಹ್ನ 2.30ಕ್ಕೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ. T20 ವಿಶ್ವಕಪ್ 2024 ಟ್ರೋಫಿ ಗೆದ್ದ ನಂತರ ಮೊದಲ ಬಾರಿಗೆ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜ ಬ್ಯಾಟ್ಸ್‌ಮನ್ʼಗಳು ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: Gold Purchase: ಪ್ಯಾನ್ ಕಾರ್ಡ್ ಇಲ್ಲದೆ ನೀವು ಎಷ್ಟು ಚಿನ್ನ ಖರೀದಿಸಬಹುದು ಗೊತ್ತಾ?
ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕನಾಗಿ ಮರಳಲಿದ್ದಾರೆ. ಇನ್ನು ಕೆಲವು ಆಟಗಾರರು ಸಹ ಏಕದಿನ ಸರಣಿಗೆ ಮರಳಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಉಪನಾಯಕ ಶುಭಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ. ಇವರಿಬ್ಬರು ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ʼನಿಂದ ಟೀಮ್ ಇಂಡಿಯಾಕ್ಕೆ ಉತ್ತಮ ಆರಂಭವನ್ನು ನೀಡಬಲ್ಲರು. ಇನ್ನು ಮೂರನೇ ಕ್ರಮಾಂಕದಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.
ವಿರಾಟ್ ಕೊಹ್ಲಿ 2023 ರ ವಿಶ್ವಕಪ್ ಫೈನಲ್ ನಂತರ ಮೊದಲ ಬಾರಿಗೆ ಏಕದಿನ ಪಂದ್ಯವನ್ನು ಆಡಲಿದ್ದಾರೆ. ಇಲ್ಲಿಯವರೆಗೆ, ವಿರಾಟ್ ಕೊಹ್ಲಿ 292 ODI ಪಂದ್ಯಗಳಲ್ಲಿ 280 ಇನ್ನಿಂಗ್ಸ್‌ಗಳಲ್ಲಿ 58.68 ರ ಅತ್ಯುತ್ತಮ ಸರಾಸರಿಯಲ್ಲಿ 13848 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ 50 ಶತಕ ಮತ್ತು 72 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅಂತರಾಷ್ಟ್ರೀಯ ಏಕದಿನ ವೃತ್ತಿಜೀವನದಲ್ಲಿ ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಸ್ಕೋರ್ 183 ರನ್.
ಇನ್ನು ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಅಯ್ಯರ್ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ʼನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್. ಇನ್ನುಳಿದಂತೆ ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಮತ್ತು ರಾಹುಲ್ ನಡುವೆ ಯಾರು ಸ್ಥಾನ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಸ್ಪಿನ್ ಬೌಲರ್ʼಗಳಾಗಿ ಎಡಗೈ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು.
ಇನ್ನೊಂದೆಡೆ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಕೂಡ ಆಡುವ ಹನ್ನೊಂದರಲ್ಲಿ ಆಯ್ಕೆಯಾಗಲಿದ್ದಾರೆ. ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಶ್ರೀಲಂಕಾ ಬ್ಯಾಟ್ಸ್‌ಮನ್ʼಗಳಿಗೆ ಸಿಂಹಸ್ವಪ್ನವಾಗಿ ಕಾಡುವುದು ಖಂಡಿತ.
ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ.
ಭಾರತ vs ಶ್ರೀಲಂಕಾ
ODI ಸರಣಿ ವೇಳಾಪಟ್ಟಿ (ಭಾರತೀಯ ಕಾಲಮಾನ):
1ನೇ ODI, ಆಗಸ್ಟ್ 2, ಮಧ್ಯಾಹ್ನ 2:30, ಕೊಲಂಬೊ
2ನೇ ODI, ಆಗಸ್ಟ್ 4, ಮಧ್ಯಾಹ್ನ 2:30, ಕೊಲಂಬೊ
3ನೇ ODI, ಆಗಸ್ಟ್ 7, ಮಧ್ಯಾಹ್ನ 2:30, ಕೊಲಂಬೊ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ