MUDA and Valmiki Corporation scam: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಿಸಿವೆ. ಈ ಎರಡೂ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯನವರು ರೆಡ್ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಹಗರಣಗಳ ಹೊಣೆ ಹೊತ್ತು ಕೂಡಲೇ ಅವರು ರಾಜೀನಾಮೆ ನೀಡಬೇಕೆಂದು ದೋಸ್ತಿ ಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ. ಇದರ ನಡುವೆ ನಾವು ಯಾವುದೇ ರೀತಿಯ ಸಂಪುಟ ಪುನರಚನೆ ಮಾಡುವುದಿಲ್ಲ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಯಾವುದೇ ಸಚಿವ ಸಂಪುಟ ರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್, ಏಶ್ಯಾಡ್ ಮತ್ತು ಕಾಮನ್ವೆಲ್ತ್ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ… pic.twitter.com/fiyL9oyn3m
— Siddaramaiah (@siddaramaiah) August 4, 2024
ಇದನ್ನೂ ಓದಿ: PSI ಪರಶುರಾಮ್ ಪ್ರಕರಣ ತನಿಖೆ ನಡೆಯಬೇಕು: ಶಾಸಕ ಶರಣಗೌಡ ಕಂದಕೂರ
ರಾಜ್ಯದ 12 ಕ್ರೀಡಾಪಟುಗಳಿಗೆ ಆಫರ್ ಲೆಟರ್!
ಭಾನುವಾರ ಗೃಹಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ಗೆದ್ದಿದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ಆಫರ್ ಲೆಟರ್ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, 'ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ನೆರವಾಗಲಿದೆ. ಅದರಂತೆ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ತೀರ್ಮಾನಿಸಿದ್ದೇವೆ. ಸುಮಾರು 12 ಜನರಿಗೆ ನೇರ ನೇಮಕಾತಿಗೆ ಉದ್ಯೋಗ ಪತ್ರ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ.
ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ… pic.twitter.com/sfWBlxAoFl
— Siddaramaiah (@siddaramaiah) August 4, 2024
ಇದನ್ನೂ ಓದಿ: ಪಿಎಸ್ಐ ಪರಶುರಾಮ್ ಅವರಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟ
2016-17ರಲ್ಲಿ ಒಲಂಪಿಕ್ಸ್ ಅಸೋಸಿಯೇಷನ್ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೆ. ಆ ವೇಳೆ ರಾಜ್ಯದ ಕ್ರೀಡಾ ಸಾಧಕರಿಗೆ, ಪದಕ ಪಡೆದವರಿಗೆ ಸರ್ಕಾರದಲ್ಲಿ ಆದ್ಯತೆ ಮೇಲೆ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದೆ. ಆದರೆ ನಂತರ ಬಂದ ಸರ್ಕಾರ ಅದನ್ನು ಜಾರಿ ಮಾಡುವ ಪ್ರಯತ್ನ ಮಾಡಲಿಲ್ಲ. ನಾನು ಮತ್ತೆ ಅಧಿಕಾರಕ್ಕೆ ಬಂದಮೇಲೆ ಈಗ ಜಾರಿ ಮಾಡಿದ್ದೇನೆ. ಈ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಕ್ರೀಡಾ ಸಾಧಕರಿಗೆ ಪೊಲೀಸ್ ಇಲಾಖೆಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಿತ್ತು. ನಾನು ಬಂದಮೇಲೆ ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು ಮೀಸಲಾತಿ ಹೆಚ್ಚಿಸಿದ್ದೇನೆ. ಪದವಿ ಪಡೆದವರಿಗೆ ಗ್ರೂಪ್ ʼCʼ ಉದ್ಯೋಗ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.